ಮಂಜುನಾಥ್ ಶೆಟ್ಟಿ…

ಶಿವಮೊಗ್ಗದ ರೈಲ್ವೆ ನಿಲ್ದಾಣದ ವೃತ್ತದಲ್ಲಿ ಆಟೋ ಚಾಲಕರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅತಿಥಿಯಾಗಿ ಕರ್ನಾಟಕ ಸರ್ಕಾರಿ ನೌಕರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್. ಷಡಾಕ್ಷರಿಯವರು ಪಾಲ್ಗೊಂಡು ಧ್ವಜಾರೋಹಣ ನೆರವೇರಿಸಿದ್ದರು.

ಕನ್ನಡ ಧ್ವಜವನ್ನು ಹಾರಿಸುವ ಮೂಲಕ ಕನ್ನಡ ರಾಜ್ಯೋತ್ಸವದ ಸಂಭ್ರಮಕ್ಕೆ ಸಾಕ್ಷಿಯಾದರು.ನಾಡು, ನುಡಿ, ನೆಲ, ಜಲ ಹಾಗೂ ಕನ್ನಡ ಸಂಸ್ಕೃತಿಯ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಕನ್ನಡದ ಅಭಿಮಾನ ಮತ್ತು ಸ್ವಾಭಿಮಾನ ಸದಾ ನಮ್ಮೆಲ್ಲರ ಹೃದಯದಲ್ಲಿ ಜೀವಂತವಾಗಿರಲಿ ಎಂದರು.

Leave a Reply

Your email address will not be published. Required fields are marked *