ಮಂಜುನಾಥ್ ಶೆಟ್ಟಿ…

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಬೆಂಗಳೂರಿನ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 71ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಸುಮಾರು 20 ಸಾವಿರ ಶಾಲಾ ಮಕ್ಕಳು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಬಾಗಲಗುಂಟೆ, ಚಿಕ್ಕಬಿದರಕಲ್ಲು ಹಾಗೂ ನೆಲಗದರನಹಳ್ಳಿಯ ಸರ್ಕಾರಿ ಪ್ರೌಢಶಾಲೆಗಳ ಸುಮಾರು 1,600 ವಿದ್ಯಾರ್ಥಿಗಳು ಅದ್ಭುತ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರಸ್ತುತಪಡಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರತಿಯೊಬ್ಬ ವಿದ್ಯಾರ್ಥಿಗೂ ಅಭಿನಂದನಾ ಪತ್ರವನ್ನು ವಿತರಿಸಲಾಯಿತು.

ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಹಾಗೂ ವ್ಯವಸ್ಥಿತವಾಗಿ ಆಯೋಜಿಸಿದ್ದಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹರ್ಷ ವ್ಯಕ್ತಪಡಿಸಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರನ್ನು ಅಭಿನಂದಿಸಿದರು.

Leave a Reply

Your email address will not be published. Required fields are marked *