ಮಂಜುನಾಥ್ ಶೆಟ್ಟಿ…

ಬಿಜೆಪಿಯ ರಾಜ್ಯ ಮಹಿಳಾ ಮೋರ್ಚಾ ವತಿಯಿಂದ ಹಾಲು ಬೆಲೆ ಏರಿಕೆ ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಸತತ 4 ನೇ ಬಾರಿ ಹಾಲು ಮತ್ತು ಮೊಸರು ದರ ಏರಿಸಿರುವ ಜನವಿರೋಧಿ ಕಾಂಗ್ರೆಸ್‌ ಸರ್ಕಾರದ ನಿರ್ಧಾರ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ ನಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಕು. ಶೋಭಾ ಕರಂದ್ಲಾಜೆ, ಮಾಜಿ ವಿಧಾನ ಪರಿಷತ್‌ ಸದಸ್ಯರಾದ ಶ್ರೀಮತಿ ಭಾರತಿ ಶೆಟ್ಟಿ, ಬೇಳೂರು ರಾಘವೇಂದ್ರ ಶೆಟ್ಟಿ,ಬಾಲಭವನ ಮಾಜಿ ಅಧ್ಯಕ್ಷರಾದ ಶ್ರೀಮತಿ ಪೂರ್ಣಿಮಾ ಪ್ರಕಾಶ್‌, ಮಹಿಳಾ ಮೋರ್ಚಾ ಪ್ರಮುಖರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *