ಮಂಜುನಾಥ್ ಶೆಟ್ಟಿ…

ಶಿವಮೊಗ್ಗ: ನವದೆಹಲಿಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಬೃಹತ್ ರ್ಯಾಲಿಯಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಎಚ್.ಸಿ. ಯೋಗೇಶ್ ಅವರ ನೇತೃತ್ವದಲ್ಲಿ ಜಿಲ್ಲೆಯ 14 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ವಿಧಾನ ಪರಿಷತ್ ಶಾಸಕರಾದ ಶ್ರೀ ಮಂಜುನಾಥ ಭಂಡಾರಿ ಅವರು ಉಪಸ್ಥಿತರಿದ್ದು, ಅವರ ಸಮ್ಮುಖದಲ್ಲಿ ಎಚ್.ಸಿ. ಯೋಗೇಶ್ ಅವರ ನೇತೃತ್ವದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ತಂಡ ರ್ಯಾಲಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿತು.

ದೇಶದ ಪ್ರಜಾಪ್ರಭುತ್ವ, ಸಂವಿಧಾನದ ಆಶಯಗಳು ಹಾಗೂ ಪ್ರಜಾಸತ್ತಾತ್ಮಕ ಮೌಲ್ಯಗಳ ರಕ್ಷಣೆಗಾಗಿ ಕಾಂಗ್ರೆಸ್ ಪಕ್ಷ ನಡೆಸುತ್ತಿರುವ ಹೋರಾಟದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ತನ್ನ ಒಗ್ಗಟ್ಟು, ಸಂಘಟನಾ ಶಕ್ತಿ ಮತ್ತು ಬದ್ಧತೆಯನ್ನು ಪ್ರದರ್ಶಿಸಿತು.

ಜಿಲ್ಲೆಯ 14 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ಒಗ್ಗೂಡಿಸಿ ದೆಹಲಿಯ ರ್ಯಾಲಿಯಲ್ಲಿ ಭಾಗವಹಿಸುವ ಮೂಲಕ ಎಚ್.ಸಿ. ಯೋಗೇಶ್ ಅವರು ಜಿಲ್ಲಾ ಮಟ್ಟದಲ್ಲಿ ಪಕ್ಷದ ಸಂಘಟನೆಯನ್ನು ಬಲಪಡಿಸುವ ತಮ್ಮ ಬದ್ಧತೆಯನ್ನು ವ್ಯಕ್ತಪಡಿಸಿದರು.

ಪಕ್ಷದ ತತ್ವ, ಸಿದ್ಧಾಂತ ಹಾಗೂ ಜನಪರ ಹೋರಾಟಗಳಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಮುನ್ನಡೆಯುವ ಸಂಕಲ್ಪದೊಂದಿಗೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ತಂಡ ರ್ಯಾಲಿಯಲ್ಲಿ ಭಾಗವಹಿಸಿತು.

Leave a Reply

Your email address will not be published. Required fields are marked *