ಮಂಜುನಾಥ್ ಶೆಟ್ಟಿ…
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 2026-27ನೇ ಸಾಲಿಗೆ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಕರೆಯಲಾಗಿದ್ದ ಅರ್ಜಿ ಅವಧಿಯನ್ನು ನ. 30 ರವರೆಗೆ ವಿಸ್ತರಿಸಲಾಗಿದೆ.
ಚೇತನ ಯೋಜನೆ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ, ಧನಶ್ರೀ ಯೋಜನೆಯ ಪ್ರೋತ್ಸಾಹಧನಕ್ಕಾಗಿ ಹಾಗೂ ಉದ್ಯೋಗಿನ ಯೋಜನೆಯ ಸಹಾಯಧನಕ್ಕಾಗಿ ಅರ್ಹ ಅರ್ಜಿದಾರರು ಗ್ರಾಮ ಒನ್, ಶಿವಮೊಗ್ಗ ಒನ್, ಬಾಪೂಜಿ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ನ.30 ರೊಳಗಾಗಿ ಅರ್ಜಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರನ್ನು ಅಥವಾ ದೂ.ಸಂ.: 08182-295514 ನ್ನು ಸಂಪರ್ಕಿಸುವುದು.