ಮಂಜುನಾಥ್ ಶೆಟ್ಟಿ…
ಶಿವಮೊಗ್ಗ: ಗುಜರಾತ್ನಲ್ಲಿ ನವೆಂಬರ್ 1ರಂದು ನಡೆದ ರಾಷ್ಟ್ರೀಯ ಏಕತಾ ದಿನಾಚರಣೆಯ ರಾಷ್ಟ್ರೀಯೋತ್ಸವದಲ್ಲಿ ತೀರ್ಥಹಳ್ಳಿ ತಾಲ್ಲೂಕು ಕೋಣಂದೂರಿನ ಶರಾವತಿ ಪ್ರಥಮ ದರ್ಜೆ ಕಾಲೇಜಿನ 16 ವಿದ್ಯಾರ್ಥಿಗಳು ಯಕ್ಷಗಾನ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ನೀಡಿದ ಯಕ್ಷಗಾನ ಪ್ರದರ್ಶನಕ್ಕೆ ಪ್ರಧಾನಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದು, ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಟ್ವಿಟರ್ ಖಾತೆಯಲ್ಲಿ ಪ್ರದರ್ಶನದ ಛಾಯಾಚಿತ್ರವನ್ನು ಹಂಚಿಕೊಂಡಿದ್ದಾರೆ.
ಈ ಛಾಯಾಚಿತ್ರದಲ್ಲಿ ಕಾಲೇಜಿನ ವಿದ್ಯಾರ್ಥಿನಿಯರಾದ ಅಮೂಲ್ಯ, ವೈಶಾಲಿ ಮತ್ತು ನಿಶ್ಚಿತಾ ಅವರು ಕಾಣಿಸಿಕೊಂಡಿದ್ದಾರೆ.
ರಾಷ್ಟ್ರಮಟ್ಟದ ವೇದಿಕೆಯಲ್ಲಿ ಮಲೆನಾಡಿನ ಸಾಂಪ್ರದಾಯಿಕ ಕಲೆಯಾದ ಯಕ್ಷಗಾನವನ್ನು ಪ್ರದರ್ಶಿಸಿ, ಪ್ರಧಾನಮಂತ್ರಿಗಳ ಮೆಚ್ಚುಗೆಗೆ ಪಾತ್ರವಾಗಿರುವುದು ಕಾಲೇಜಿಗೆ ಹೆಮ್ಮೆಯ ಸಂಗತಿಯಾಗಿದೆ.
ಪ್ರಧಾನಮಂತ್ರಿಗಳು ತಮ್ಮ ಸಾಮಾಜಿಕ ಜಾಲತಾಣದಲ್ಲಿ ವಿದ್ಯಾರ್ಥಿಗಳ ಕಲಾಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿರುವುದಕ್ಕೆ ಎನ್ಇಎಸ್ ಆಡಳಿತ ಮಂಡಳಿ ಸದಸ್ಯರು, ಕಾಲೇಜಿನ ಪ್ರಾಚಾರ್ಯರು ಕೃತಜ್ಞತೆ ಸಲ್ಲಿಸಿದ್ದಾರೆ.