ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಖಂಡನೀಯ ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸೂಕ್ತ ರಕ್ಷಣೆ ಇಲ್ಲವಾಗಿದೆ ಯುವತಿ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗಳನ್ನು ಕೂಡಲೇ ಬಂಧಿಸಬೇಕು ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಅತ್ಯಾಚಾರಿಗಳನ್ನು ಗಲ್ಲಿಗೇರಿಸಬೇಕು. ರಾಜ್ಯದ ಎಲ್ಲಾ ಪ್ರವಾಸಿ ತಾಣಗಳಲ್ಲಿಯು ಸೂಕ್ತ ಪೋಲಿಸ್ ಬಂದೋಬಸ್ತ್ ವ್ಯವಸ್ಥೆ ಮಾಡಬೇಕು. ರಾಜ್ಯದಲ್ಲಿ ಅಕ್ರಮ ಚಟುವಟಿಕೆಗಳು ನಡೆಯದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಮಹಿಳೆಯರ ರಕ್ಷಣೆ ಸೂಕ್ತ ಕ್ರಮಗಳನ್ನು ರಾಜ್ಯ ಸರ್ಕಾರ ಕೈಗೊಳ್ಳಬೇಕು. ರಾಜ್ಯದಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದ್ದು ಆಡಳಿತ ವ್ಯವಸ್ಥೆ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಮಹಿಳೆಯರಿಗೆ ಸೂಕ್ತ ರಕ್ಷಣೆಯೇ ಇಲ್ಲವಾಗಿದೆ ಮಹಿಳೆಯರ ರಕ್ಷಣೆ ಬಗ್ಗೆ ಹಾಗೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಬಗ್ಗೆ ಸರ್ಕಾರ ಗಮನ ವಹಿಸಬೇಕಾಗಿದೆ.

ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಘಟನೆ ನಂತರ ಆರೋಪಿಗಳನ್ನು ಬಂಧಿಸಲು ಸೂಕ್ತ ಕ್ರಮ ಕೈಗೊಳ್ಳುವಲ್ಲಿ ಗೃಹಸಚಿವ ಅರಗ ಜ್ಞಾನೇಂದ್ರ ವಿಫಲರಾಗಿದ್ದಾರೆ ಗೃಹ ಖಾತೆಯನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ವಿಫಲವಾಗಿರುವ ಸಚಿವ ಅರಗ ಜ್ಞಾನೇಂದ್ರ ಅವರನ್ನು ಸಚಿವ ಸ್ಥಾನದಿಂದ ಕೈಬಿಡಬೇಕು ಎಂಬುದು ಎನ್ ಎಸ್ ಯುಐ ಆಗ್ರಹ. ಈ ಸಮಯದಲ್ಲಿ ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಚೇತನ್ ಕೆ ಯುವ ಕಾಂಗ್ರೆಸ್ ಮುಖಂಡರು ಮಧುಸೂದನ್, ಎನ್ ಎಸ್ ಯುಐ ರಾಜ್ಯ ಕಾರ್ಯದರ್ಶಿ ಬಾಲಾಜಿ ಎಚ್ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ರು ಮುಹಮ್ಮದ್ ನಿಹಾಲ್ , ರವಿ ವಿನಯ್ ತಾಡ್ಲೆ ಗಿರೀಶ್ ರವಿ ಅಬ್ದುಲ್‌ ಮಂಜು ಪುರಲೇ , ಅಲ್ವಿನ್ ಚಂದ್ರೋಜಿ ರಾವ್ ನರೇಂದ್ರ ಅನಿಲ್ ಆಚಾರ್ ಕಿರಣ ಸಂಜಯ್ ವೆಂಕಟೇಶ್ ಮುನುಸ್ವಾಮಿ ನಿಖಿಲ್ ಅಭಿಷೇಕ್, ಉಪೇಂದ್,ರ ಚರಣ್ ಧನು , ಬಸವರಾಜ, ಇನ್ನಿತರರಿದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153