ಮಂಜುನಾಥ್ ಶೆಟ್ಟಿ…

ಬಿಜೆಪಿ ಶಿವಮೊಗ್ಗ ವಿಭಾಗದಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಪ್ರಯತ್ನಗಳಿಗೆ ಅವಕಾಶ ನೀಡುವುದಿಲ್ಲ.ಪ್ರಜಾಪ್ರಭುತ್ವವನ್ನು ಉಳಿಸುವುದರ ಜೊತೆಗೆ ಸಂವಿಧಾನದ ಆಶಯಗಳನ್ನು ಈಡೇರಿಸುತ್ತೇವೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಶಿವಮೊಗ್ಗದ ರಾಮಣ್ಣ ಶ್ರೇಷ್ಠಿ ಪಾರ್ಕ್ ಬಳಿ ‘ಅರಾಜಕತೆ ಅಳಿಸಿ, ಪ್ರಜಾಪ್ರಭುತ್ವ ಉಳಿಸಿ’ ಎಂಬ ಘೋಷಣೆಯೊಂದಿಗೆ ಬಿಜೆಪಿ ವತಿಯಿಂದ ಆಯೋಜಿಸಿದ್ದ ಪಾದಯಾತ್ರೆಯ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶದ ಯುವ ಸಮುದಾಯದ ಶಕ್ತಿಯನ್ನು ರಾಷ್ಟ್ರದ ಅಭಿವೃದ್ಧಿಗೆ ಬಳಸಿಕೊಳ್ಳುವ ಅಗತ್ಯವಿದೆ ಎಂದರು.

ಸಂವಿಧಾನದ ಆಶಯವನ್ನು ನಾವು ಎತ್ತಿಹಿಡಿಯಬೇಕು. ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಪ್ರಯತ್ನಿಸಿದರೆ ಅದನ್ನು ಸಹಿಸುವುದಿಲ್ಲ. ದೇಶದ ಯುವಕರು ಸದಾ ರಾಷ್ಟ್ರದ ಬಗ್ಗೆ ಬದ್ಧರಾಗಿದ್ದಾರೆ. ಯುವ ಸಮುದಾಯದ ಶಕ್ತಿಯನ್ನು ರಾಷ್ಟ್ರೀಯ ಪ್ರಭಾವದಲ್ಲಿ ಬಳಸಿಕೊಂಡು ಭಾರತವನ್ನು ಜಗತ್ತಿಗೆ ಗುರುವಾಗುವಂತಹ ಸ್ಥಿತಿಗೆ ಕೊಂಡೊಯ್ಯಬೇಕು ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ ನಾವೆಲ್ಲರೂ ಪಾದಯಾತ್ರೆಯಲ್ಲಿ ಭಾಗವಹಿಸಿದ್ದೇವೆ. ಪ್ರಜಾಪ್ರಭುತ್ವವನ್ನು ಉಳಿಸಿಯೇ ಉಳಿಸುತ್ತೇವೆ. ಸಂವಿಧಾನದ ಆಶಯಗಳನ್ನು ಈಡೇರಿಸುತ್ತೇವೆ. ಕಮ್ಯುನಿಸ್ಟ್ ಹಾಗೂ ಕಾಂಗ್ರೆಸ್ ಪಕ್ಷಗಳು ಅರಾಜಕತೆ ಸೃಷ್ಟಿಸಲು ಪ್ರಯತ್ನಿಸಿದರೂ ಜಾಗೃತ ಪ್ರಜೆಗಳು ಇರುವವರೆಗೆ ಅದು ಸಾಧ್ಯವಿಲ್ಲ. ಬಿಜೆಪಿ ಕೂಡ ಅರಾಜಕತೆ ನಡೆಯಲು ಬಿಡುವುದಿಲ್ಲ ಎಂಬುದನ್ನು ಶಿವಮೊಗ್ಗ ವಿಭಾಗದ ಈ ಪಾದಯಾತ್ರೆ ತೋರಿಸಿಕೊಟ್ಟಿದೆ ಎಂದು ಹೇಳಿದರು. 

ಪಾದಯಾತ್ರೆಯಲ್ಲಿ ಸಂಸದರಾದ ಬಿ.ವೈ ರಾಘವೇಂದ್ರ, ಕೇಂದ್ರ ಸಚಿವ ಶೋಭ ಕರದ್ಲಾಂಜೆ, ಎಂಎಲ್ ಸಿ ಸಿಟಿ ರವಿ ಡಾ ಧನಂಜಯ್ ಸರ್ಜಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್, ಪ್ರಧಾನ ಕಾರ್ಯದರ್ಶಿ ಹರಿಕೃಷ್ಣ ಉಪಸ್ಥಿತರಿದ್ದರು. 

Leave a Reply

Your email address will not be published. Required fields are marked *