ಮಂಜುನಾಥ್ ಶೆಟ್ಟಿ…
ಶಿವಮೊಗ್ಗ ಜಿಲ್ಲಾಡಳಿತದಲ್ಲಿ ಮಹತ್ವದ ಬದಲಾವಣೆಯಾಗಿದ್ದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರನ್ನು ವರ್ಗಾವಣೆ ಮಾಡಿ.ಅವರ ಸ್ಥಾನಕ್ಕೆ ಪ್ರಕಾಶ್ ಜಿ.ಟಿ. ನಿಟ್ಟಲಿ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸೇವೆಗಳು-1) ಅಕ್ಟೋಬರ್ 6, 2026ರಂದು ಹೊರಡಿಸಿರುವ ವರ್ಗಾವಣೆ ಅಧಿಸೂಚನೆಯ ಪ್ರಕಾರ, ಶಿವಮೊಗ್ಗ ಜಿಲ್ಲಾಧಿಕಾರಿಯಾಗಿದ್ದ ಪ್ರಭುಲಿಂಗ ಕವಳಿಕಟ್ಟಿ, ಐಎಎಸ್ (2013) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ.
ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ಪ್ರಕಾಶ್ ಜಿ.ಟಿ. ನಿಟ್ಟಲಿ, ಐಎಎಸ್ (2018) ಅವರನ್ನು ನೇಮಕ ಮಾಡಲಾಗಿದೆ.ಇವರು ಈ ಹಿಂದೆ ಬೆಂಗಳೂರಿನ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದ್ದು, ಪ್ರಭುಲಿಂಗ ಕವಳಿಕಟ್ಟಿ ಅವರ ಸ್ಥಾನವನ್ನು ಭರ್ತಿ ಮಾಡಲಿದ್ದಾರೆ.