ಮಂಜುನಾಥ್ ಶೆಟ್ಟಿ…

ಶಿವಮೊಗ್ಗ ನಗರದ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಶಾಲಾ ಬಸ್ ಚಾಲಕರು ಹಾಗೂ ನಿರ್ವಾಹಕರಿಗೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಂಚಾರಿ ಸಿಪಿಐ ದೇವರಾಜ್ ಅವರು ಮಕ್ಕಳ ಸುರಕ್ಷತೆ ಮತ್ತು ರಕ್ಷಣೆಯ ದೃಷ್ಟಿಯಿಂದ ಪೋಕ್ಸೋ (POCSO) ಕಾಯ್ದೆ, ಶಾಲಾ ವಾಹನಗಳ ಸಂಚಾರ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿಗದಿಪಡಿಸಿರುವ ಮಾರ್ಗಸೂಚಿಗಳು ಹಾಗೂ ರಸ್ತೆ ಸಂಚಾರ ನಿಯಮಗಳ ಕುರಿತು ಅರಿವು ಮೂಡಿಸಲಾಯಿತು.

ಶಾಲಾ ವಾಹನಗಳಲ್ಲಿ ಪ್ರಯಾಣಿಸುವ ಮಕ್ಕಳ ಸುರಕ್ಷತೆಯನ್ನು ಪ್ರತಿಯೊಬ್ಬ ಚಾಲಕ ಮತ್ತು ನಿರ್ವಾಹಕರು ತಮ್ಮ ಪ್ರಮುಖ ಜವಾಬ್ದಾರಿಯನ್ನಾಗಿ ಪರಿಗಣಿಸಬೇಕು. ಮಕ್ಕಳೊಂದಿಗೆ ಗೌರವಯುತವಾಗಿ ನಡೆದುಕೊಳ್ಳುವುದು, ಅವರ ಸುರಕ್ಷತೆಗೆ ಆದ್ಯತೆ ನೀಡುವುದು ಹಾಗೂ ಯಾವುದೇ ರೀತಿಯ ದೌರ್ಜನ್ಯ ಅಥವಾ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸುವ ಕುರಿತು ತಿಳಿಸಲಾಯಿತು.

ಅಲ್ಲದೆ, ಶಾಲಾ ವಾಹನಗಳ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವುದು, ವೇಗದ ಮಿತಿ ಕಾಯ್ದುಕೊಳ್ಳುವುದು, ಸಂಚಾರ ನಿಯಮಗಳನ್ನು ಅನುಸರಿಸುವುದು ಹಾಗೂ ಸುರಕ್ಷಿತವಾಗಿ ಮಕ್ಕಳನ್ನು ಶಾಲೆಗೆ ಕರೆತರುವುದು ಮತ್ತು ಮನೆಗೆ ತಲುಪಿಸುವ ಕುರಿತು ಚಾಲಕರು ಮತ್ತು ನಿರ್ವಾಹಕರಿಗೆ ಅಗತ್ಯ ಸೂಚನೆಗಳನ್ನು ನೀಡಲಾಯಿತು.

Leave a Reply

Your email address will not be published. Required fields are marked *