ಮಂಜುನಾಥ್ ಶೆಟ್ಟಿ…

ಭದ್ರಾವತಿ ತಾಲ್ಲೂಕಿನ ತಿಮ್ಮಾಪುರ ಗ್ರಾಮದ ಶ್ರೇಯಾ ಎನ್. ಗೌಡ ಅವರು ಯುಪಿಎಸ್‌ಸಿ ನಡೆಸುವ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ (ಎನ್‌ಡಿಎ) ಪರೀಕ್ಷೆಯಲ್ಲಿ ಮಹಿಳಾ ವಿಭಾಗದಲ್ಲಿ ದೇಶಕ್ಕೆ ಪ್ರಥಮ ರ‍್ಯಾಂಕ್ ಪಡೆಯುವ ಮೂಲಕ ಶಿವಮೊಗ್ಗ ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ.

ಶ್ರೇಯಾ ಅವರು 1ರಿಂದ 10ನೇ ತರಗತಿವರೆಗೆ ಭದ್ರಾವತಿಯ ಬಿಜಿಎಸ್ ಕಾರೇಹಳ್ಳಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ್ದಾರೆ. ಬಳಿಕ ಬೆಂಗಳೂರಿನ ರಾಜಾಜಿನಗರದಲ್ಲಿರುವ ಬೇಸ್ ಪಿಯು ಕಾಲೇಜಿನಲ್ಲಿ ಪಿಯು ಶಿಕ್ಷಣ ಪೂರ್ಣಗೊಳಿಸಿದ್ದಾರೆ. ಪ್ರಸ್ತುತ ಮಂಗಳೂರಿನ ಸುರತ್ಕಲ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದಾರೆ. ನಕ್ಷೆಗಳನ್ನುನೋಡಿ

ಬಾಲ್ಯದಿಂದಲೇ ಭಾರತೀಯ ಸೇನೆಗೆ ಸೇರಿ ದೇಶ ಸೇವೆ ಮಾಡಬೇಕೆಂಬ ಆಸೆ ಹೊಂದಿದ್ದ ಶ್ರೇಯಾಗೆ, 8ನೇ ತರಗತಿಯಲ್ಲಿ ಓದುತ್ತಿದ್ದಾಗ ಎನ್‌ಡಿಎಗೆ ಮಹಿಳೆಯರಿಗೂ ಪ್ರವೇಶಾವಕಾಶ ಕಲ್ಪಿಸಿರುವ ವಿಚಾರ ತಿಳಿದಿತ್ತು. ಇದರಿಂದ ಅವರ ಸೈನಿಕಳಾಗುವ ಕನಸಿಗೆ ಮತ್ತಷ್ಟು ಪ್ರೇರಣೆ ದೊರೆಯಿತು.

ಅಂದಿನಿಂದ ಎನ್‌ಡಿಎ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸುವ ಗುರಿಯೊಂದಿಗೆ ಸಿದ್ಧತೆ ಮಾಡಿಕೊಂಡಿದ್ದ ಶ್ರೇಯಾ, ಮೊದಲ ಅವಕಾಶದಲ್ಲೇ ಮಹಿಳಾ ವಿಭಾಗದಲ್ಲಿ ದೇಶಕ್ಕೆ ಪ್ರಥಮ ರ‍್ಯಾಂಕ್ ಪಡೆಯುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ. 

Leave a Reply

Your email address will not be published. Required fields are marked *