ಮಂಜುನಾಥ್ ಶೆಟ್ಟಿ…

ಶಿವಮೊಗ್ಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಪ್ರಕಾಶ್ ಜಿ.ಟಿ. ನಿಟ್ಟಲಿ ಅವರು ಇಂದು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರಿಂದ ಅಧಿಕಾರ ಹಸ್ತಾಂತರ ಪ್ರಕ್ರಿಯೆ ನಡೆಯಿತು.

ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಶಿವಮೊಗ್ಗದಲ್ಲಿ ಸುಮಾರು 11 ತಿಂಗಳ ಕಾಲ ಸೇವೆ ಸಲ್ಲಿಸಿದ್ದು, ಇದೀಗ ವರ್ಗಾವಣೆಗೊಂಡು ಜಿಲ್ಲೆಯಿಂದ ನಿರ್ಗಮಿಸಿದ್ದಾರೆ.

ನಿನ್ನೆ ವರ್ಗಾವಣೆ ಆದೇಶ ಪ್ರಕಟವಾಗುತ್ತಿದ್ದಂತೆ ನೂತನ ಜಿಲ್ಲಾಧಿಕಾರಿ ಪ್ರಕಾಶ್ ಜಿ.ಟಿ. ಅವರು 24 ಗಂಟೆಯೊಳಗೆ ಶಿವಮೊಗ್ಗಕ್ಕೆ ಆಗಮಿಸಿ ಅಧಿಕಾರ ಸ್ವೀಕರಿಸಿದ್ದಾರೆ.

Leave a Reply

Your email address will not be published. Required fields are marked *