ಮಂಜುನಾಥ್ ಶೆಟ್ಟಿ…
ಶಿವಮೊಗ್ಗ ನಗರದಾದ್ಯಂತ ಸಂಚರಿಸುವ ಆಟೋ ರಿಕ್ಷಾಗಳಲ್ಲಿ ಮೀಟರ್ ಅಳವಡಿಸಿಕೊಳ್ಳುವುದು ಕಡ್ಡಾಯವಾಗಿದ್ದು ಮುಂದಿನ 10 ದಿನಗಳೊಳಗೆ ಮೀಟರ್ ಅಳವಡಿಸಿಕೊಳ್ಳುವಂತೆ ಶಿವಮೊಗ್ಗ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ (ಆರ್‌ಟಿಒ) ಸೂಚನೆ ನೀಡಿದೆ.
ನಗರದಲ್ಲಿ ಮೀಟರ್ ಅಳವಡಿಸದೇ ಆಟೋರಿಕ್ಷಾಗಳನ್ನು ಸಂಚರಿಸುತ್ತಿರುವುದು ಹಾಗೂ ಪ್ರಯಾಣಿಕರಿಂದ ಅವೈಜ್ಞಾನಿಕವಾಗಿ ಹೆಚ್ಚಿನ ಬಾಡಿಗೆ ವಸೂಲಿ ಮಾಡುತ್ತಿರುವ ಕುರಿತು ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ಮತ್ತು ಪ್ರಯಾಣಿಕರ ಹಿತದೃಷ್ಟಿಯಿಂದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಕಟ್ಟುನಿಟ್ಟಿನ ಸೂಚನೆ ಹೊರಡಿಸಿದೆ.
ಶಿವಮೊಗ್ಗ ನಗರದ ಎಲ್ಲಾ ಆಟೋರಿಕ್ಷಾ ಚಾಲಕರು ಹಾಗೂ ಮಾಲೀಕರು ಮುಂದಿನ 10 ದಿನಗಳೊಳಗಾಗಿ ಕಡ್ಡಾಯವಾಗಿ ಆಟೋರಿಕ್ಷಾಗಳಿಗೆ ಮೀಟರ್ ಅಳವಡಿಸಿಕೊಳ್ಳಬೇಕು. ಅಲ್ಲದೆ ಪ್ರಯಾಣಿಕರಿಂದ ಪ್ರಾಧಿಕಾರ ನಿಗದಿಪಡಿಸಿರುವ ದರವನ್ನಷ್ಟೇ ಪಡೆಯಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೂರು ಸಲ್ಲಿಸಲು… ಸಹಾಯವಾಣಿ: 8277983404