ಮಂಜುನಾಥ್ ಶೆಟ್ಟಿ…

ಶಿವಮೊಗ್ಗ ತಾಲೂಕಿನಲ್ಲಿ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಜೀವ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಅವರ ಸ್ಥಾನಕ್ಕೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಅನೂಪ್ ಸಂಜೋಗ್ ಎಂ.ಆರ್. ಅವರನ್ನು ನೇಮಕ ಮಾಡಿ ಸ್ಥಳ ನಿಯುಕ್ತಿಗೊಳಿಸಲಾಗಿದೆ.

ಈ ಮೂಲಕ ಶಿವಮೊಗ್ಗ ತಾಲೂಕಿಗೆ ಹೊಸ ತಹಶೀಲ್ದಾರ್ ಆಗಿ ಅನೂಪ್ ಸಂಜೋಗ್ ಎಂ.ಆರ್. ಅವರು ಕರ್ತವ್ಯ ನಿರ್ವಹಿಸಲಿದ್ದಾರೆ.

Leave a Reply

Your email address will not be published. Required fields are marked *