ಮಂಜುನಾಥ್ ಶೆಟ್ಟಿ…
ಶಿವಮೊಗ್ಗ ಕಾಂಗ್ರೆಸ್ ಪಕ್ಷದ ಯುವನೇತಾರ ಹಾಗೂ ಪಕ್ಷದ ಯುವ ಸಂಘಟನೆಯ ಪ್ರಮುಖ ಹೆಚ್‌ಪಿ ಗಿರೀಶ್ ಅವರನ್ನು ಕಾಂಗ್ರೆಸ್ ಸರ್ಕಾರ ಗುರುತಿಸಿ “ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿ” ಯ ನಿರ್ದೇಶಕರಾಗಿ ಸರ್ಕಾರ ನೇಮಿಸಿ ಆದೇಶ ಹೊರಡಿಸಿದೆ.
ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರೇ ಪದನಿಮಿತ ಅಧ್ಯಕ್ಷರಾಗಿದ್ದಾರೆ.
ಕಳೆದ 20 ವರ್ಷಕ್ಕೂ ಹೆಚ್ಚು ಕಾಲದಿಂದ, ಚಿಕ್ಕ ವಯಸ್ಸಿನಲ್ಲೇ ಕಾಂಗ್ರೆಸ್ ಪಕ್ಷದ ಕಟ್ಟಾಳಾಗಿ ಯುವ ಕಾಂಗ್ರೆಸ್ ನಲ್ಲಿ ಸಂಘಟನೆ ಮಾಡುತ್ತಾ ಶಿವಮೊಗ್ಗ ನಗರ ಯುವ ಕಾಂಗ್ರೆಸ್ ನ ಅಧ್ಯಕ್ಷರಾಗಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನ ಅಧ್ಯಕ್ಷರಾಗಿ ಜಿಲ್ಲೆ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಅತಿ ಹೆಚ್ಚು ವಿನೂತನ ರೀತಿಯ ಹೋರಾಟಗಳ ಮುಖಾಂತರ, ಸಾಮಾಜಿಕ ಚಿಂತನೆ ಯೊಂದಿಗೆ ಯುವ ಕಾಂಗ್ರೆಸ್ ಸಂಘಟನೆಯಲ್ಲಿ ಕಾರ್ಯನಿರ್ವಹಿಸಿದ್ದಾರೆ.