ಮಂಜುನಾಥ್ ಶೆಟ್ಟಿ…

ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಮಾನ್ಯ ಅಧ್ಯಕ್ಷರಾದ ಡಾ. ಕೆ.ಪಿ. ಅಂಶುಮಂತ್ ರವರು, ಕರ್ನಾಟಕ ಸರ್ಕಾರದಿಂದ ನಾಮನಿರ್ದೇಶನಗೊಂಡ ನಿರ್ದೇಶಕರಾದ ಶ್ರೀ ಗಣಪತಿ ಸೊರಬ ಹಾಗೂ ಶ್ರೀ ರಾಜಪ್ಪ ಎಂ.ಜಿ. ಚಿಕ್ಕಮಗಳೂರು ರವರು ಪ್ರಾಧಿಕಾರದ ಕಚೇರಿಗೆ ಆಗಮಿಸಿದ ಸಂದರ್ಭದಲ್ಲಿ ಆತ್ಮೀಯವಾಗಿ ಸ್ವಾಗತಿಸಿ ಅಭಿನಂದಿಸಲಾಯಿತು.


ಈ ಸಂದರ್ಭದಲ್ಲಿ ನೂತನ ನಿರ್ದೇಶಕರಾದ ಶ್ರೀ ಗಣಪತಿ ಹಾಗೂ ಶ್ರೀ ರಾಜಪ್ಪ ಎಂ.ಜಿ. ರವರು, ಆಡಳಿತಾಧಿಕಾರಿಗಳಾದ ಶ್ರೀ ಸತೀಶ್ ಆರ್, ಭೂ ಅಭಿವೃದ್ಧಿ ಅಧಿಕಾರಿ (ತಾಂತ್ರಿಕ) ಹಾಗೂ ಉಪ ಆಡಳಿತಾಧಿಕಾರಿಗಳಾದ ಶ್ರೀ ಪ್ರಶಾಂತ್ ಕೆ, ಭೂ ಅಭಿವೃದ್ಧಿ ಅಧಿಕಾರಿ (ಕೃಷಿ) ಶ್ರೀ ಶ್ರೀನಿವಾಸ ಚಿಂತಾಲ್ ವಿ. ಹಾಗೂ ಭೂ ಅಭಿವೃದ್ಧಿ ಅಧಿಕಾರಿ (ಸಹಕಾರ) ಶ್ರೀ ಡಾ. ನಾಗೇಶ್ ಎಸ್. ಡೋಂಗರೆ ರವರ ಉಪಸ್ಥಿತಿಯಲ್ಲಿ ದಿನಚರಿ (ಡೈರಿ) ಬಿಡುಗಡೆಗೊಳಿಸಿ ವಿತರಿಸಲಾಯಿತು.


ಕಾರ್ಯಕ್ರಮದಲ್ಲಿ ರೈತರ ಹಿತದೃಷ್ಟಿಯಿಂದ ಪ್ರಾಧಿಕಾರದ ವತಿಯಿಂದ ಕೈಗೊಳ್ಳಲಾಗುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ರೈತರಿಗೆ ಅನುಕೂಲವಾಗುವ ಯೋಜನೆಗಳ ಅನುಷ್ಠಾನ ಮತ್ತು ಅಚ್ಚುಕಟ್ಟು ಪ್ರದೇಶದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ಅಚ್ಚುಕಟ್ಟು ಪ್ರದೇಶದ ರೈತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *