ಮಂಜುನಾಥ್ ಶೆಟ್ಟಿ…
ಶಿವಮೊಗ್ಗದ ಸರ್ಕಾರಿ ನೌಕರರ ಭವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಶಿವಮೊಗ್ಗ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರಾದ ಶ್ರೀ ಆರ್. ಮೋಹನ್ ಕುಮಾರ್ ಅವರ ಹುಟ್ಟುಹಬ್ಬವನ್ನು ರಾಜ್ಯಾಧ್ಯಕ್ಷರಾದ ಷಡಕ್ಷರಿ ಸಮ್ಮುಖದಲ್ಲಿ ವಿಶೇಷವಾಗಿ ಆಚರಿಸಲಾಯಿತು.
ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್. ಷಡಾಕ್ಷರಿಯವರು ಜಿಲ್ಲಾಧ್ಯಕ್ಷರಾದ ಶ್ರೀ ಆರ್. ಮೋಹನ್ ಕುಮಾರ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಉತ್ತಮ ಆರೋಗ್ಯ, ಸುಖ, ಶಾಂತಿ ಹಾಗೂ ದೀರ್ಘಾಯುಷ್ಯ ಲಭಿಸಲಿ ಎಂದರು.ಸರ್ಕಾರಿ ನೌಕರರ ಹಿತಾಸಕ್ತಿ ಮತ್ತು ಸಂಘಟನೆಯ ಬಲವರ್ಧನೆಗಾಗಿ ಅವರ ಸೇವಾ ಕಾರ್ಯಗಳು ನಿರಂತರವಾಗಿ ಮುಂದುವರಿಯಲಿ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡಲಿ ಎಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ಕಾರ್ಯದರ್ಶಿಗಳಾದ ಆರ್. ಪಾಪಣ್ಣ, ಖಜಾಂಚಿಗಳಾದ ಡಾ. ಸಿ.ಎ. ಹಿರೇಮಠ್, ಕಾರ್ಯಾಧ್ಯಕ್ಷರಾದ ಕೃಷ್ಣಮೂರ್ತಿ, ರಂಗನಾಥ್ ಸೇರಿದಂತೆ ಸಂಘದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.