ಮಂಜುನಾಥ್ ಶೆಟ್ಟಿ…
ಶಿವಮೊಗ್ಗ ನಗರದ ಲಗನ್ ಕಲ್ಯಾಣ ಮಂದಿರದಲ್ಲಿ ಸಹಕಾರ ಮಹಾಮಂಡಲದ ವತಿಯಿಂದ 73ನೇ ರಾಜ್ಯಮಟ್ಟದ ಸಹಕಾರ ಸಪ್ತಾಹ – 2026 ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ರಾಜ್ಯ ಸರ್ಕಾರದ ಸಹಕಾರ ಸಚಿವರಾದ ಲಕ್ಷ್ಮಣ ಸವದಿ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 25 ವರ್ಷಗಳಿಂದ ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆ ಸಂಘಟನಾ ಕಾರ್ಯದರ್ಶಿಯಾಗಿ ಮತ್ತು ಹಲವಾರು ಸಂಘ ಸಂಸ್ಥೆಗಳಲ್ಲಿ ಅಧ್ಯಕ್ಷರು ಮತ್ತು ಕಾರ್ಯದರ್ಶಿಯಾಗಿ ಪ್ರಸ್ತುತ ರಾಷ್ಟ್ರೀಯ ಶಿಕ್ಷಣ ಸಮಿತಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದಲ್ಲಿ ಸೇವೆ ಸಲ್ಲಿಸುತ್ತಿರುವ ಡಾ ಸತೀಶ್ ಕುಮಾರ್ ಶೆಟ್ಟಿ ಅವರಿಗೆ ಪ್ರತಿಷ್ಠಿತ “ಸಹಕಾರ ಶ್ರೇಷ್ಠ ಪ್ರಶಸ್ತಿ” ನೀಡಿ ಗೌರವವಾಗಿ ಸನ್ಮಾನಿಸಲಾಯಿತು.
ಇದೇ ಸಮಯದಲ್ಲಿ ಸಹಕಾರ ಸಚಿವರಾದ ಲಕ್ಷ್ಮಣ್ ಸವದಿ ಅವರು ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದಿಸಿದರು.ಸಹಕಾರ ಕ್ಷೇತ್ರದಲ್ಲಿ ಶ್ರೀಯುತರು ಸಲ್ಲಿಸುತ್ತಿರುವ ನಿಸ್ವಾರ್ಥ ಸೇವೆ, ದಕ್ಷ ನಾಯಕತ್ವ, ದೂರದೃಷ್ಟಿ, ಸಂಘಟನಾ ಚಾತುರ್ಯ ಹಾಗೂ ಸಮಾಜಮುಖಿ ಚಿಂತನೆಗಳಿಗೆ ಸಂದ ಗೌರವವೇ ಈ ಪ್ರಶಸ್ತಿಯಾಗಿದೆ.