ಮಂಜುನಾಥ್ ಶೆಟ್ಟಿ…

ಶಿವಮೊಗ್ಗ ತಾಲೂಕು ಶಿಶು ಅಭಿವೃದ್ದಿ ಯೋಜನೆಯ ವ್ಯಾಪ್ತಿಯ ಅಂಗನವಾಡಿಗಳಲ್ಲಿ ಖಾಲಿಯಿರುವ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗಳನ್ನು‌ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಖಾಲಿ ಇರುವ 19 ಅಂಗನವಾಡಿ ಕಾರ್ಯಕರ್ತೆ ಮತ್ತು 54 ಸಹಾಯಕಿ ಹುದ್ದೆಗಳಿಗೆ ಗೌರವಧನ ಸೇವೆ ಆಧಾರದ ಮೇಲೆ ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಿದ್ದು19 ರಿಂದ 35 ವರ್ಷ ವಯೋಮಿತಿಯ ಕನಿಷ್ಠ ಪಿಯುಸಿ ತೇರ್ಗಡೆಯಾಗಿರುವ ಸ್ಥಳೀಯ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರು ಅರ್ಜಿ ಸಲ್ಲಿಸಬಹುದು.


ಶಿವಮೊಗ್ಗ ತಾಲೂಕಿನ
ಆಸಕ್ತರು ಅರ್ಜಿ ನಮೂನೆಯನ್ನು ಶಿವಮೊಗ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಡಿ.19 ರೊಳಗಾಗಿ ವಿನೋಬನಗರದ ವೀರ ಸಾವರ್ಕರ್ ವಾಣಿಜ್ಯ ಸಂಕೀರ್ಣದಲ್ಲಿರುವ ಕಚೇರಿಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ದೂ.ಸಂ.: 08182-295110 ನ್ನು ಸಂಪರ್ಕಿಸುವಂತೆ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Leave a Reply

Your email address will not be published. Required fields are marked *