ಮಂಜುನಾಥ್ ಶೆಟ್ಟಿ…

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2026-27ನೇ ಸಾಲಿಗೆ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದ ಬಿ.ಎಸ್ಸಿ ನರ್ಸಿಂಗ್ ಮತ್ತು ಜಿಎನ್‌ಎಂ ನರ್ಸಿಂಗ್ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವನ್ನು ನೀಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.


ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮತ್ತು ಎನ್‌ಪಿಸಿಐ ಮ್ಯಾಪಿಂಗ್ ಆಕ್ಟಿವ್ ಆಗಿರುವ ಬಗ್ಗೆ ಖಚಿತಪಡಿಸಿಕೊಳ್ಳುವುದು.ವಿದ್ಯಾರ್ಥಿಯ ಕುಟುಂಬದ ಒಟ್ಟು ವಾರ್ಷಿಕ ಆದಾಯವು ರೂ. 2.50 ಲಕ್ಷ ಮೀರಿರಬಾರದು, ವಿದ್ಯಾರ್ಥಿಗಳನ್ನು ಅನುದಾನದ ಲಭ್ಯತೆಯನುಸಾರ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ವಿದ್ಯಾರ್ಥಿಗಳು ಈ ಯೋಜನೆಯಡಿ ಉತ್ತೇಜನ ಮೊತ್ತವನ್ನು ಪಡೆಯಲು ಪ್ರತಿ ಶೈಕ್ಷಣಿಕ ವರ್ಷದಲ್ಲಿ ಹೊಸ ಅರ್ಜಿಗಳನ್ನು ಸಲ್ಲಿಸತಕ್ಕದು. ಉತ್ತೇಜನ ಮೊತ್ತವನ್ನು ಪಡೆಯಲು ಹಿಂದಿನ ವರ್ಷದ ಪರೀಕ್ಷೆಯಲ್ಲಿ ಕನಿಷ್ಠ ಶೇ.50 ಅಂಕಗಳನ್ನು ಪಡೆದಿರಬೇಕು. ಒಂದು ವೇಳೆ ಅನುದಾನ ಲಭ್ಯವಿದ್ದಲ್ಲಿ ಶೇ.50 ಕ್ಕಿಂತ ಕಡಿಮೆ ಅಂಕ ಗಳಿಸಿರುವ ವಿದ್ಯಾರ್ಥಿಗಳನ್ನು ಸಹ ಮೆರಿಟ್ ಆಧಾರದ ಮೇಲೆ ಪರಿಗಣಿಸಲಾಗುವುದು.


ಆಸಕ್ತ ವಿದ್ಯಾರ್ಥಿಗಳುhttps://sevaone.karnataka. gov.in/ services. ಲಿಂಕ್ ಮೂಲಕ ಆನ್‌ಲೈನ್‌ನಲ್ಲಿ ದಿ:31/12/2026 ರೊಳಗಾಗಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ.: 08182-220206 ಅಥವಾ ವೆಬ್‌ಸೈಟ್ https://dom.karnataka.gov.in ನ್ನು ಹಾಗೂ ಜಿಲ್ಲಾ ಶಿವಮೊಗ್ಗ – 7676888388, ತಾಲೂಕು ಮಾಹಿತಿ ಕೇಂದ್ರಗಳಾದ ಭದ್ರಾವತಿ-9538853680, ತೀರ್ಥಹಳ್ಳಿ-8861982835, ಶಿಕಾರಿಪುರ-7829136724, ಸಾಗರ-7338222907, ಸೊರಬ-9513815513, ಹೊಸನಗರ-9008447029 ಗಳನ್ನು ಸಂಪರ್ಕಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Leave a Reply

Your email address will not be published. Required fields are marked *