ಮಂಜುನಾಥ್ ಶೆಟ್ಟಿ…
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ, ಹಿರಿಯೂರು ವತಿಯಿಂದ ಅಭಿನಂದನ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಸನ್ಮಾನಿಸಿ ಅಭಿನಂದಿಸಿದರು. ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್. ಷಡಾಕ್ಷರಿಯವರು ಅತಿಥಿಗಳಾಗಿ ಭಾಗವಹಿಸಿದರು.
ಸರ್ಕಾರಿ ನೌಕರರ ಪ್ರಮುಖ ಬೇಡಿಕೆಗಳಾದ ಎನ್ಪಿಎಸ್ ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಮರುಜಾರಿ, ತುಟ್ಟಿಭತ್ಯೆ (DA), ಹಬ್ಬದ ಮುಂಗಡ ಸೇರಿದಂತೆ ವಿವಿಧ ಸೇವಾ ಸೌಲಭ್ಯಗಳು ಹಾಗೂ ನೌಕರರ ಹಿತಾಸಕ್ತಿಗಳಿಗೆ ಸಂಬಂಧಿಸಿದ ವಿಷಯಗಳ ಕುರಿತು ಸವಿಸ್ತಾರವಾಗಿ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು.
ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ಸರ್ಕಾರಿ ನೌಕರರ ಹಬ್ಬದ ಮುಂಗಡ ಮೊತ್ತವನ್ನು ₹25,000ರಿಂದ ₹50,000ಕ್ಕೆ ಹೆಚ್ಚಿಸುವ ಮಹತ್ವದ ಘೋಷಣೆ ಮಾಡಿದರು.
ಸರ್ಕಾರಿ ನೌಕರರು ರಾಜ್ಯದ ಆಡಳಿತ ವ್ಯವಸ್ಥೆಯ ಪ್ರಮುಖ ಆಧಾರಸ್ತಂಭಗಳಾಗಿದ್ದು, ಸರ್ಕಾರದ ಜನಪರ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿದ್ದಾರೆ. ನೌಕರರ ಸೇವಾ ಭದ್ರತೆ, ಆರ್ಥಿಕ ಸುರಕ್ಷತೆ ಹಾಗೂ ಗೌರವಯುತ ನಿವೃತ್ತಿ ಜೀವನಕ್ಕೆ ಪೂರಕವಾದ ಸೌಲಭ್ಯಗಳನ್ನು ಒದಗಿಸುವುದು ಅತ್ಯಗತ್ಯವೆಂದು ಪ್ರತಿಪಾದಿಸಿದರು.
ನೌಕರರ ನ್ಯಾಯಯುತ ಬೇಡಿಕೆಗಳ ಈಡೇರಿಕೆ, ಹಕ್ಕುಗಳ ಸಂರಕ್ಷಣೆ ಹಾಗೂ ಸಂಘಟನೆಯ ಬಲವರ್ಧನೆಗೆ ಸಂಘವು ನಿರಂತರವಾಗಿ ಬದ್ಧವಾಗಿದ್ದು, ನೌಕರರ ಧ್ವನಿಯನ್ನು ಸರ್ಕಾರದ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಪ್ರತಿನಿಧಿಸುವ ಜವಾಬ್ದಾರಿಯನ್ನು ಮುಂದುವರಿಸಲಿದೆ ಎಂದು ತಿಳಿಸಿದರು.
ಕನ್ನಡ ಭಾಷೆ, ನಾಡು, ನುಡಿ, ನೆಲ, ಜಲ ಹಾಗೂ ಸಂಸ್ಕೃತಿಯ ಸಂರಕ್ಷಣೆಯ ಆಶಯದೊಂದಿಗೆ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಸಚಿವರಾದ ಟಿ. ರಘುಮೂರ್ತಿ, ಜಮೀರ್ ಅಹ್ಮದ್, ಶಾಸಕರಾದ ವೀರೇಂದ್ರ ಪಪ್ಪಿ ರವರು ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.