ಮಂಜುನಾಥ್ ಶೆಟ್ಟಿ…
ಶಿವಮೊಗ್ಗ ತಾಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ನೂತನ ಅಧ್ಯಕ್ಷರಾಗಿ ವಿನಯ್ ತಾಂದಲೆ ಅವರು ನೇಮಕವಾಗಿದ್ದಾರೆ.
ಸರ್ಕಾರದ ಆದೇಶ ಸಂಖ್ಯೆ ಮಮಇ 10 ಮಮಅ 2024 (ಭಾಗ-1), ದಿನಾಂಕ: 13.03.2024ರ ಆದೇಶದಲ್ಲಿ ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯನ್ನು ರಚಿಸಿ ಆದೇಶಿಸಲಾಗಿದ್ದು, ಶಿವಮೊಗ್ಗ ತಾಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ನೂತನ ಅಧ್ಯಕ್ಷರಾಗಿ ಶ್ರೀ ವಿನಯ್ ತಾಂದಲೆ ಇವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ವಿನಯ್ ತಾಂದಲೆ ಇವರಿಗೆ ಶಿಕ್ಷಣ ಸಚಿವರಾದ ಶ್ರೀ ಮಧು ಬಂಗಾರಪ್ಪ, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಶ್ರೀ ಎಂ. ಶ್ರೀಕಾಂತ್, ಎಸ್. ಮರಿಯಪ್ಪ, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಯೋಗಿಶ್, ಕಾಂಗ್ರೆಸ್ ಯುವ ಮುಖಂಡರಾದ ಶ್ರೀ ಶರತ್ ಮರಿಯಪ್ಪ, ಕೋಟೆ ಸೀತಾರಾಮಾಂಜನೇಯ ದೇವಾಲಯ ನಿರ್ವಹಣಾ ಸಮಿತಿ ಅಧ್ಯಕ್ಷರಾದ ದೇವೇಂದ್ರಪ್ಪ, ಗ್ಯಾರಂಟಿ ಯೋಜನಾ ಸದಸ್ಯರಾದ ಬಸವರಾಜ್, ಭಾವಸಾರ ಕ್ಷತ್ರಿಯ ಮಹಾಜನ ಸಮಾಜದ ಅಧ್ಯಕ್ಷರಾದ ಶ್ರೀ ಗಜೇಂದ್ರನಾಥ್ ಮಾಳೋದೆ, ಭಾವಸಾರ ಸೊಸೈಟಿ ಅಧ್ಯಕ್ಷರಾದ ಶ್ರೀ ಸಂತೋಷ್ ಸಾಕ್ರೆ ಸೇರಿದಂತೆ, ಅಪಾರ ಸ್ನೇಹಿತರು ಅಭಿನಂದಿಸಿದ್ದಾರೆ.



