ಮಂಜುನಾಥ್ ಶೆಟ್ಟಿ…
ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪತ್ರಕರ್ತ ಸುರೇಶ್ ಅವರ ನೆರವಿಗೆ ಧಾವಿಸುವ ಮೂಲಕ ವಿಧಾನ ಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಡಿ.ಎಸ್. ಅರುಣ್ ಅವರು ಮಾನವೀಯತೆ ಮೆರೆದಿದ್ದಾರೆ.
ಕೆಲ ದಿನಗಳ ಹಿಂದೆ ಶಿವಮೊಗ್ಗದ ಬೈಪಾಸ್ ರಸ್ತೆಯ ನಂದನ್ ಶಾಲೆಯ ಎದುರು ಅಪಘಾತದಲ್ಲಿ ಗಾಯಗೊಂಡು ಪಾದದ ಮೂಳೆ ಮುರಿತಕ್ಕೊಳಗಾಗಿ ಸರ್ಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿವಮೊಗ್ಗ ನಗರದ ಪತ್ರಕರ್ತರಾದ ಸುರೇಶ್ ಅವರನ್ನು ವಿಧಾನ ಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಶ್ರೀ ಡಿ.ಎಸ್. ಅರುಣ್ ಅವರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಚಿಕಿತ್ಸಾ ವೆಚ್ಚಕ್ಕೆ ವೈಯಕ್ತಿಕ ಸಹಾಯಧನ ನೀಡಿ ಧೈರ್ಯ ತುಂಬಿದರು.
ಪತ್ರಕರ್ತರಾದ ಸುರೇಶ್ ಅವರು ಶೀಘ್ರ ಗುಣಮುಖರಾಗಿ ಮತ್ತೆ ಸಹಜ ಜೀವನಕ್ಕೆ ಮರಳಲಿ ಎಂದು ಹಾರೈಸಿದರು.



