ಮಂಜುನಾಥ್ ಶೆಟ್ಟಿ…

ನಗರದ ಪ್ರತಿಷ್ಠಿತ ಡಿವಿಎಸ್ ವಿದ್ಯಾ ಸಂಸ್ಥೆಯು ನವಂಬರ್ 27 28 29ರಂದು ಅದ್ದೂರಿಯಾಗಿ DVS ಹಬ್ಬವನ್ನು ಆಚರಿಸುತ್ತಿದ್ದೇವೆ ಎಂದು ಸಂಸ್ಥೆಯ ಅಧ್ಯಕ್ಷ ಬಸಪ್ಪ ಗೌಡ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮೂರು ದಿನಗಳ ಕಾಲ ಡಿ ವಿ ಎಸ್ ಸಂಸ್ಥೆಯ ಆವರಣದಲ್ಲಿ ನಡೆಯುವ ಕಾರ್ಯಕ್ರಮ ವಿವರ ನೀಡಿದರು.

ನವೆಂಬರ್ 27ರ ಕಾರ್ಯಕ್ರಮ…

ನವೆಂಬರ್ 27ರಂದು ಬೆಳಿಗ್ಗೆ 10 ಗಂಟೆಗೆ ಕಲಾ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ನಡೆಯಲಿದ್ದು ವಿಧಾನ ಪರಿಷತ್ ಸದಸ್ಯರಾದ ಬೋಜೇಗೌಡರು ಡಾ ಧನಂಜಯ್ ಸರ್ಜಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಯೋಗೇಶ್ ಡಿವೈಎಸ್ಪಿ ಚಂದ್ರಶೇಖರ್
ಎಡಿಸಿ ಅಭಿಷೇಕ್ ಅನುರಾಧ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹ ಕಾರ್ಯದರ್ಶಿ ಡಾ ಸತೀಶ್ ಕುಮಾರ್ ಶೆಟ್ಟಿ ವಹಿಸಲಿದ್ದಾರೆ.

ನವಂಬರ್ 28ರ ಕಾರ್ಯಕ್ರಮ…

28ರಂದು ಬೆಳಗ್ಗೆ 10 ಗಂಟೆಗೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ನಡೆಯಲಿದ್ದು ಶಾಸಕಿ ಶಾರದಾ ಪೂರ್ಯ ನಾಯ್ಕ್ ಅಲೆಮಾರಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಪಲ್ಲವಿ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಮೆಗ್ಗಾನ್ ವೈದ್ಯಾಧಿಕಾರಿ ಡಾ ಗಿರೀಶ್ ಬಾಬು ಸೇರಿದಂತೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿರ್ದೇಶಿಕ ಬಿ ಗೋಪಿನಾಥ ವಹಿಸಲಿದ್ದಾರೆ.

ನವಂಬರ್ 29ರ ಕಾರ್ಯಕ್ರಮ…

ನವೆಂಬರ್ 29ರ ಭಾನುವಾರ ಬೆಳಿಗ್ಗೆ 10: 00ಗಂಟೆಗೆ ಡಿವಿಎಸ್ ನಾ ಸ್ವತಂತ್ರ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ವಾರ್ಷಿಕೋತ್ಸವ ಮತ್ತು ಪ್ರತಿಭಾ ಪುರಸ್ಕಾರ ನಡೆಯಲಿದ್ದು ವಿಧಾನ ಪರಿಷತ್ ಶಾಸಕಿ ಬಲ್ಕಿಶ್ ಭಾನು ಪಾಲಿಕೆ ಆಯುಕ್ತ ಮಾಯಣ್ಣ ಗೌಡ ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ನಾಗರಾಜ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಅಧ್ಯಕ್ಷರನ್ನು ಕೊಳಲೆ ರುದ್ರಪ್ಪ ವಹಿಸಲಿದ್ದಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷರಾದ ಮಧುಸೂದನ್ ಶೆಟ್ಟಿ ಕಾರ್ಯದರ್ಶಿ ಎಸ್‌ಪಿ ದಿನೇಶ್ ಸಹ ಕಾರ್ಯದರ್ಶಿ ಡಾ ಸತೀಶ್ ಕುಮಾರ್ ಶೆಟ್ಟಿ ಮತ್ತು ನಿರ್ದೇಶಕರುಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *