ಮಂಜುನಾಥ್ ಶೆಟ್ಟಿ…

ರಾಜ್ಯದ ಉದ್ಯೋಗಾಕಾಂಕ್ಷಿಗಳು ಹಾಗೂ ಉದ್ಯೋಗದಾತರನ್ನು ಒಂದೇ ವೇದಿಕೆಯಡಿ ಸಂಪರ್ಕಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಅಭಿವೃದ್ಧಿಪಡಿಸಿರುವ ‘ಉದ್ಯೋಗ ಸೇತು’ (UDYOGHA SETU) ) ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳುವಂತೆ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ಅರ್ಹ ಅಭ್ಯರ್ಥಿಗಳಿಗೆ ಮನವಿ ಮಾಡಿದೆ.


ಈ ಪೋರ್ಟಲ್‌ನಲ್ಲಿ ಉದ್ಯೋಗಾಕಾಂಕ್ಷಿಗಳು ಹಾಗೂ ಉದ್ಯೋಗದಾತರು ತಮ್ಮದೇ ಆದ ಪ್ರೊಫೈಲ್‌ಗಳನ್ನು ರಚಿಸಿಕೊಂಡು ನೋಂದಾಯಿಸಿಕೊಳ್ಳಬಹುದಾಗಿದ್ದು, ಮುಂದಿನ ದಿನಗಳಲ್ಲಿಯೂ ತಮ್ಮ ವೈಯಕ್ತಿಕ ಹಾಗೂ ವೃತ್ತಿಪರ ಮಾಹಿತಿಯನ್ನು ನವೀಕರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯದ 18 ವರ್ಷ ಮೇಲ್ಪಟ್ಟ ಎಲ್ಲಾ ಅರ್ಹ ಅಭ್ಯರ್ಥಿಗಳು ಈ ಪೋರ್ಟಲ್‌ನಲ್ಲಿ ನೋಂದಾಯಿಸಿಕೊAಡು, ಇದರ ಸೌಲಭ್ಯಗಳನ್ನು ಪ್ರಸ್ತುತ ಹಾಗೂ ಭವಿಷ್ಯದ ಉದ್ಯೋಗಾವಕಾಶಗಳಿಗಾಗಿ ಸದುಪಯೋಗಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ.


ಉದ್ಯೋಗಾಕಾಂಕ್ಷಿಗಳು ಉದ್ಯೋಗಾವಕಾಶಗಳಿಗಾಗಿ ವಿವಿಧ ಖಾಸಗಿ ಕಂಪನಿಗಳು ಹಾಗೂ ಕಚೇರಿಗಳಿಗೆ ಅಲೆದಾಡುವ ಅವಶ್ಯಕತೆಯನ್ನು ಕಡಿಮೆಗೊಳಿಸಿ, ಉದ್ಯೋಗದಾತರು ಮತ್ತು ಉದ್ಯೋಗಾಕಾಂಕ್ಷಿಗಳನ್ನು ಒಂದೇ ಡಿಜಿಟಲ್ ವೇದಿಕೆಯಲ್ಲಿ ಸಂಪರ್ಕಿಸುವ ಮೂಲಕ ಉದ್ಯೋಗಾವಕಾಶಗಳನ್ನು ಸುಲಭವಾಗಿ ತಲುಪಿಸುವಲ್ಲಿ ಈ ಪೋರ್ಟಲ್ ಸಹಕಾರಿಯಾಗಲಿದೆ.

ಆದ್ದರಿಂದ, ಜಿಲ್ಲೆಯ ಎಲ್ಲಾ ಅರ್ಹ ಯುವಜನತೆ ಈ ಕೆಳಗಿನ ಪೋರ್ಟಲ್ ಲಿಂಕ್ ಮೂಲಕ ನೋಂದಾಯಿಸಿಕೊಳ್ಳುವಂತೆ ಹಾಗೂ ನೋಂದಣಿ ಪ್ರಕ್ರಿಯೆಯ ಸಂಪೂರ್ಣ ಮಾಹಿತಿಗಾಗಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ನೋಂದಣಿ ಕುರಿತಾದ ವಿವರಣಾತ್ಮಕ ಯೂಟೂಬ್ ವಿಡಿಯೋವನ್ನು ವೀಕ್ಷಿಸುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Leave a Reply

Your email address will not be published. Required fields are marked *