ಮಂಜುನಾಥ್ ಶೆಟ್ಟಿ…
ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಅಧಿಕಾರಿ ಮತ್ತು ನೌಕರರ ಸಂಘ, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಕನ್ನಡ ನುಡಿ ಹಬ್ಬ ಹಾಗೂ ಕ್ರೀಡೋತ್ಸವ – 2026 ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್. ಷಡಾಕ್ಷರಿಯವರು ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ಕನ್ನಡ ಭಾಷೆ ನಮ್ಮ ಅಸ್ಮಿತೆ, ನಾಡಿನ ಸಂಸ್ಕೃತಿ ನಮ್ಮ ಹೆಮ್ಮೆ ಹಾಗೂ ಕ್ರೀಡೆ ಆರೋಗ್ಯ, ಶಿಸ್ತು ಮತ್ತು ಸ್ಫೂರ್ತಿಯ ಸಂಕೇತವಾಗಿದೆ. ನೌಕರರ ವೃತ್ತಿಜೀವನದ ಒತ್ತಡದ ನಡುವೆ ಇಂತಹ ಕ್ರೀಡಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ದೈಹಿಕ ಮತ್ತು ಮಾನಸಿಕ ಚೈತನ್ಯವನ್ನು ಹೆಚ್ಚಿಸುವುದರ ಜೊತೆಗೆ ಪರಸ್ಪರ ಬಾಂಧವ್ಯ, ಸಹಕಾರ ಹಾಗೂ ಸಂಘಟನಾ ಶಕ್ತಿಯನ್ನು ಬಲಪಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದರು.
ಪ್ರತಿಭಾ ಪುರಸ್ಕಾರ ಪ್ರದಾನ ಹಾಗೂ ಇಲಾಖೆಯ ನಿವೃತ್ತ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಗೌರವಪೂರ್ವಕ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಪ್ರಧಾನ ನಿರ್ದೇಶಕರಾದ ರಾಮಪ್ರಸಾದ್ ಎಸ್.ಎಂ., ಹಿರೇಮಗಳೂರು ಕಣ್ಣನ್, ಮಿಥುನ್ ಬಿರಾಲ, ನಿರ್ದೇಶಕರಾದ ಕೃಷ್ಣ ಎನ್. ಬುಗಾಟ್ಯಗೋಳ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಆರ್. ಮೋಹನ್ ಕುಮಾರ್, ಮುಖ್ಯ ಲೆಕ್ಕಾಧಿಕಾರಿಗಳಾದ ಶ್ರೀಕಾಂತ್, ಮಹಾನಗರ ಪಾಲಿಕೆಯ ಸಿ.ಇ.ಒ ಲೋಕೇಶ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು, ಸಂಘದ ಪದಾಧಿಕಾರಿಗಳು ಹಾಗೂ ನೌಕರರು ಉಪಸ್ಥಿತರಿದ್ದರು.



