ಇಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆಯನ್ನು ಮಾಜಿ ವಿಧಾನ ಪರಿಷತ್ ಸದಸ್ಯರಾದ ಮೋನಪ್ಪ ಭಂಡಾರಿ ಉದ್ಘಾಟಿಸಿ ಮಾತನಾಡಿದರು. ಈ ಸಭೆಯ ಅಧ್ಯಕ್ಷತೆಯನ್ನು ಬಿಜೆಪಿ ಜಿಲ್ಲಾಧ್ಯಕ್ಷರಾದ ಟಿ.ಡಿ.ಮೇಘರಾಜ್ ವಹಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ರಾಜ್ಯ ಪ್ರಕೋಷ್ಟದ ಸಂಯೋಜಕರಾದ ಎಂ.ಬಿ.ಭಾನುಪ್ರಕಾಶ್, ವಿಧಾನಪರಿಷತ್ ಸದಸ್ಯರಾದ ಆಯನೂರ್ ಮಂಜುನಾಥ್, ಎಸ್.ರುದ್ರೇಗೌಡ್ರು, ರಾಜ್ಯ ಪ್ರಶಿಕ್ಷಣ ಪ್ರಕೋಷ್ಟದ ಸಹ ಸಂಚಾಲಕರಾದ ಆರ್.ಕೆ.ಸಿದ್ದರಾಮಣ್ಣ, ವಿಭಾಗ ಸಂಘಟನಾ ಸಹ ಕಾರ್ಯದರ್ಶಿ ಎ.ಎನ್.ನಟರಾಜ್, ಮಹಾನಗರ ಪಾಲಿಕೆಯ ಮಹಾಪೌರಾದ ಸುನೀತಾ ಅಣ್ಣಪ್ಪ, ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾದ ಎಸ್.ದತ್ತಾತ್ರಿಯವರು, ರಾಜ್ಯ ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಡಿ.ಎಸ್.ಅರುಣ್, ಭದ್ರಾ ಕಾಡಾ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ ಪವಿತ್ರ ರಾಮಯ್ಯ, ಸೂಡಾ ಅಧ್ಯಕ್ಷರಾದ ಎಸ್.ಎಸ್.ಜ್ಯೋತಿಪ್ರಕಾಶ್, ಜಿಲ್ಲಾ ಉಪಾಧ್ಯಕ್ಷರುಗಳು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪದಾಧಿಕಾರಿಗಳು, ಪ್ರಮುಖರು ಉಪಸ್ಥಿತರಿದ್ದರು.

ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153