ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ಗೆ ಅನಾರೋಗ್ಯ ಕಾಣಿಸಿಕೊಂಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸುಧಾಕರ್ ಆರೋಗ್ಯ ಏರುಪೇರಾಗಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಗೆ ಸುಧಾಕರ್ ಗೈರಾಗಿದ್ದಾರೆ.
ಚಿಕ್ಕಬಳ್ಳಾಪುರ ಪ್ರವಾಸವನ್ನೂ ರದ್ದು ಪಡಿಸಿರುವ ಸುಧಾಕರ್ ಸದ್ಯ ಸದಾಶಿವನಗರದಲ್ಲಿರುವ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.ಕೆಲವು ತಿಂಗಳ ಹಿಂದೆ ಡಾ. ಕೆ. ಸುಧಾಕರ್‌ಗೆ ಕೊರೊನಾ ಸೋಂಕು ತಗುಲಿತ್ತು, ಬಳಿಕ ಚೇತರಿಸಿಕೊಂಡಿದ್ದರು.
ಇದೀಗ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದು, ಹಾಸಿಗೆಗಳ ಲಭ್ಯತೆ ಪರಿಶೀಲನೆ ಸೇರಿದಂತೆ ಹಲವು ಆಸ್ಪತ್ರೆಗಳಿಗೂ ಸುಧಾಕರ್ ಭೇಟಿ ನೀಡಿದ್ದರು, ಹಲವು ಸಭೆಗಳಲ್ಲಿ ಕೂಡ ಭಾಗವಹಿಸಿದ್ದರು.
ಸುಧಾಕರ್ ಅವರಿಗೆ ಯಾವ ರೀತಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ ಎನ್ನುವ ಕುರಿತು ಮಾಹಿತಿ ಇನ್ನೂ ಲಭ್ಯವಾಗಬೇಕಿದೆ.
ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ