ಶಿವಮೊಗ್ಗದಿಂದ ಚಿತ್ರದುರ್ಗಕ್ಕೆ ಹಾದುಹೋಗುವ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸುವ ಯೋಜನೆ, ವಿದ್ಯಾನಗರ ರೈಲ್ವೆ ಮೇಲ್ಸೇತುವೆ ಕಾಮಗಾರಿ ಹಾಗೂ ತುಂಗಾ ನದಿ ಮೇಲ್ಸೇತುವೆ ಕಾಮಗಾರಿ ಗುದ್ದಲಿಪೂಜೆ ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿಲ್ಲೆಯ ಕಾಂಗ್ರೆಸ್ ಪಕ್ಷದ ವಿಧಾನಪರಿಷತ್ ಸದಸ್ಯರಾದ ಆರ್ ಪ್ರಸನ್ನ ಕುಮಾರ್ ರವರನ್ನು ಹಾಗೂ ವಾರ್ಡಿನ ಪ್ರಥಮ ಪ್ರಜೆ, ಶಿವಮೊಗ್ಗ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕರಾದ ಯಮುನಾ ರಂಗೇಗೌಡ ರವರನ್ನು ಈ ಗುದ್ದಲಿ ಪೂಜೆ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಅಧಿಕಾರಿಗಳು ಆಹ್ವಾನ ಪತ್ರಿಕೆಯಲ್ಲಿ ಹೆಸರನ್ನು ಮುದ್ರಿಸಿದೆ ಕಾರ್ಯಕ್ರಮಕ್ಕೆ ಆಹ್ವಾನಿಸದೇ ಶಿಷ್ಟಾಚಾರ ಉಲ್ಲಂಘನೆ ಮಾಡಿರುವುದನ್ನು ಖಂಡಿಸಿ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಕಾಂಗ್ರೆಸ್ ಮುಖಂಡರು ಅಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನು ಸಂಸದರನ್ನು ಕೇಳಲು ಹೋದ ಸಂದರ್ಭದಲ್ಲಿ ಪೊಲೀಸರು ಸಂವಿಧಾನ ಹಕ್ಕನ್ನು ಕೇಳಿದ ಮುಖಂಡರುಗಳನ್ನು ತಡೆದರು ಇದನ್ನು ಖಂಡಿಸಿ ಗುದ್ದಲಿ ಪೂಜೆ ನಡೆಯುವ ಸ್ಥಳದಲ್ಲಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿ ಶಿಷ್ಟಾಚಾರ ಉಲ್ಲಂಘನೆ ಮಾಡಿದ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗುತ್ತಿದ್ದ 20ಕ್ಕೂ ಹೆಚ್ಚು ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ

ವೇದಿಕೆಯಲ್ಲಿ ಆಸಿನರಾದ ವಿಧಾನ ಪರಿಷತ್ ಸದಸ್ಯ ಆರ್ ಪ್ರಸನ್ನಕುಮಾರ್ ಅವರನ್ನು ವೇದಿಕೆಯಿಂದ ಕೆಳಗಿಳಿದು ಹೋಗುವಂತೆ ಆದೇಶಿಸಿದ ಮಹಾನಗರಪಾಲಿಕೆ ಆಡಳಿತ ಪಕ್ಷದ ನಾಯಕ ಚನ್ನಬಸಪ್ಪ ( ಚೆನ್ನಿ ) . ಇಂದು ನಗರದ ಹೊಳೆಹೊನ್ನೂರು ರಸ್ತೆಯಲ್ಲಿ ಇರುವ ಅರಕೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಗುದ್ದಲಿ ಪೂಜೆ ನಡೆಯುವ ಮುನ್ನ ಯುವ ಕಾಂಗ್ರೆಸ್ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಸರಿಯಾದ ರೀತಿಯಲ್ಲಿ ಆಹ್ವಾನ ಇರಲಿಲ್ಲ ಎಂದು ಆರೋಪಿಸಿ ಬೃಹತ್ ಪ್ರತಿಭಟನೆ ನಡೆಸಿದರು. ಆ ಸಂದರ್ಭದಲ್ಲಿ ಪೊಲೀಸರ ಮಧ್ಯಪ್ರವೇಶ ನಂತರ ಪೂಜಾ ಕಾರ್ಯಕ್ರಮ ನಡೆಯಿತು.
ಆನಂತರ ವೇದಿಕೆ ಸಮಾರಂಭದಲ್ಲಿ ರಾಜ್ಯ ಸಚಿವರಾದ ಸಿ.ಸಿ.ಪಾಟೀಲ್, ಕೆ.ಹೆಚ್.ಈಶ್ವರಪ್ಪ, ಹಾಗೂ ಸಂಸದ ಬಿ.ವೈ.ರಾಘವೇಂದ್ರ, ಹಲವು ಮುಖಂಡರ ಸಮ್ಮುಖದಲ್ಲೇ ಮೇಲಿನ ಮಾತುಗಳನ್ನು ಆಡಿದ್ದಾರೆ. ಇದರಿಂದ ಕೆಲ ಸಮಯ ಗೊಂದಲಕ್ಕೆ ಕಾರಣವಾಯಿತು. ನಂತರ ಸಚಿವ ಕೆ ಎಸ್ ಈಶ್ವರಪ್ಪನವರು ಸಮಾಧಾನದ ನಂತರ ಸಭಾ ಕಾರ್ಯಕ್ರಮ ನಡೆಯಿತು.

ಈ ಪ್ರತಿಭಟನೆಯಲ್ಲಿ ಪಾಲಿಕೆ ಸದಸ್ಯರಾದ ಆರ್ ಸಿ. ನಾಯ್ಕ , ಮೇಹಕ್ ಶರೀಫ್ , ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್ ರಾಜ್ಯ ಕಾರ್ಯದರ್ಶಿ ಕೆ.ಚೇತನ್ , ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್ , ಕಾಂಗ್ರೆಸ್ ಪಕ್ಷದ ಮುಖಂಡರಾದ ರಂಗೇಗೌಡ, ಅಲ್ಪಸಂಖ್ಯಾತರ ಘಟಕದ ನಗರಾಧ್ಯಕ್ಷ ಮೊಹಮ್ಮದ್ ನಿಹಾಲ್ ಎನ್ಎಸ್ಯುಐ ರಾಜ್ಯ ಕಾರ್ಯದರ್ಶಿ ಬಾಲಾಜಿ , ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಎಸ್. ಕುಮರೇಶ್ , ಕಾಂಗ್ರೆಸ್ ಪಕ್ಷದ ಮಹಿಳಾ ಮುಖಂಡರಾದ ಸುವರ್ಣ ನಾಗರಾಜ್ , ಪಕ್ಷದ ಮುಖಂಡರುಗಳಾದ ಪುಷ್ಪಕ್ ಕುಮಾರ್, ಮಸ್ತಾನ್, ವೆಂಕಟೇಶ್ , ಪುರ್ಲೆ ಮಂಜು , ಬಾಬುಸಾಬ್, ಅಬ್ದುಲ್, ನವೀನ್, ವಿನಯ್ ಪವನ್ ಮಲ್ಲಿ ಇತರರು ಉಪಸ್ಥಿತರಿದ್ದರು .

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153