ಗಣೇಶ ಹಬ್ಬವನ್ನು ಆಚರಿಸುವ ಸಂಬಂಧದ ಮಾರ್ಗಸೂಚಿಗಳ
* ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಸ್ಥಾನದೊಳಗೆ ಮತ್ತು ತಮ್ಮ ತಮ್ಮ ಮನೆಗಳಲ್ಲಿ ಆಚರಿಸತಕ್ಕದ್ದು.ಇದನ್ನು ಹೊರತುಪಡಿಸಿ ಬೇರೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಹೊರಾಂಗಣಗಳಲ್ಲಿ ಚಪ್ಪರ /ಪೆಂಡಾಲ್ /ಶಾಮಿಯಾನ ವೇದಿಕೆಗಳನ್ನು ನಿರ್ಮಿಸಿ ಗೌರಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವಂತಿಲ್ಲ
* ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ರೀತಿಯ ಮೆರವಣಿಗೆ /ಮನೋರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ
- ಪಾರಂಪರಿಕ ಗೌರಿ ಗಣೇಶ ಮೂರ್ತಿಯನ್ನು ಪೂಜಿಸುವವರು ಅವುಗಳನ್ನು ಮನೆಯಲ್ಲಿಯೇ ವಿಸರ್ಜಿಸುವುದು ಅಥವಾ ಮೂರ್ತಿಗಳನ್ನು ಅತೀ ಸಮೀಪ ವಾಗುವಂತಹ ಮಾರ್ಗಗಳನ್ನು ಬಳಸಿಕೊಂಡು ಮಹಾನಗರ ಪಾಲಿಕೆ /ಜಿಲ್ಲಾಡಳಿತ /ಹತ್ತಿರದ ಸ್ಥಳೀಯ ಸಂಸ್ಥೆಗಳ /ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಈಗಾಗಲೇ ನಿರ್ಮಿಸಲಾದ ಹೊಂಡ ,ಕಲ್ಯಾಣಿ ಅಥವಾ ಮೊಬೈಲ್ ಟ್ಯಾಂಕ್ ಗಳಲ್ಲಿ ಅಥವಾ ಕೃತಕ ವಿಸರ್ಜನ ಟ್ಯಾಂಕರ್ ಗಳಲ್ಲಿ ವಿಸರ್ಜಿತ ತಕ್ಕದ್ದು
* ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನಗಳಲ್ಲಿ ದಿನನಿತ್ಯ ಸ್ಯಾನಿಟೇಷನ್ ಮಾಡತಕ್ಕದ್ದು ,ಸಾರ್ವಜನಿಕ ದರ್ಶನಕ್ಕಾಗಿ ಆಗಮಿಸುವ ಭಕ್ತಾದಿಗಳಿಗೆ ಸಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆಯನ್ನು ಕಲ್ಪಿಸತಕ್ಕದ್ದು .
- ದರ್ಶನಕ್ಕಾಗಿ ಬರುವ ಭಕ್ತರಿಗೆ ಕೋವಿಡ 19 ಸಮುಚಿತ ವರ್ತನೆಯಂತೆ ಕಡ್ಡಾಯವಾಗಿ ಮಾಸ್ಕ್ ಅನ್ನು ಧರಿಸುವುದು ಕನಿಷ್ಠ 06 ಅಡಿ ಸಾಮಾಜಿಕ ಅಂತರವನ್ನು ಗುರುತಿಸುವುದು ಹಾಗೂ ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳ ತಕ್ಕದ್ದು .
* ಗಣೇಶೋತ್ಸವ ಆಚರಣೆ ಸಂದರ್ಭಕ್ಕನುಗುಣವಾಗಿ ಸರ್ಕಾರ ,ಜಿಲ್ಲಾಡಳಿತ ,ಪೋಲಿಸ್ ,ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆ ಪ್ರಾಧಿಕಾರಗಳಿಂದ ಹೊರಡಿಸಲಾಗುವ ಎಲ್ಲಾ ಆದೇಶ /ನಿರ್ದೇಶನ ಹಾಗೂ ಸೂಚನೆಗಳನ್ನು ಸಹ ಕಡ್ಡಾಯವಾಗಿ ಪಾಲಿಸತಕ್ಕದ್ದು
ಕೋವಿಡ 19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು .ಅಲ್ಲದೆ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ , ಪೋಲಿಸ್ ಇಲಾಖೆ , ಮಹಾನಗರ ಪಾಲಿಕೆ , ಮಾಲಿನ್ಯ ನಿಯಂತ್ರಣ ಮಂಡಳಿ , ಅಗ್ನಿ ಶಾಮಕ ಇಲಾಖೆ , ಜಿಲ್ಲಾಡಳಿತ ಹಾಗೂ ಇತರೆ ಇಲಾಖೆಗಳಿಂದ ಹೊರಡಿಸಲಾದ ಸೂಚನೆಗಳು /ಪ್ರಾಮಾಣಿತ ಕಾರ್ಯವಿಧಾನ ಗಳನ್ನು ಸಹ ಕಡ್ಡಾಯವಾಗಿ ಪಾಲಿಸತಕ್ಕದ್ದು.
ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ
ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153