ನಮಗೆ ವಿದ್ಯೆ ಕಲಿಸಿದ ಗುರುಗಳು ಮುಂದೊಂದು ದಿನ ನಮ್ಮನ್ನು ಕಂಡು ಹೆಮ್ಮೆ ಪಡುವಂತಹ ಪ್ರಜೆಗಳಾಗಿ ಹೊರಹೊಮ್ಮಬೇಕು ಎಂದು ಖ್ಯಾತ ಚಲನಚಿತ್ರ ನಟ ಪ್ರಥಮ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ನಗರದ ಜೆಎನ್ ಎನ್ ಸಿ ಇ ಕಾಲೇಜಿನ ಎಂಬಿಎ ವಿಭಾಗದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ‘ ಉತ್ಥಾನ – 2021’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ ಎಂಬ ಹಿರಿಯರ ಮಾತಿನಂತೆ ನಮ್ಮ ಸಾಧನೆಯೇ ನಮ್ಮ ಗುರುಗಳಿಗೆ ನಾವು ನೀಡಿದ ಗೌರವ ನೂತನ ಚಲನಚಿತ್ರ ನಟ ಭಯಂಕರ ಸಿನಿಮಾ ನವೆಂಬರ್ ಮೊದಲ ವಾರದಲ್ಲಿ ಬಿಡುಗಡೆಗೊಳಿಸಲು ಸಿದ್ಧತೆ ನಡೆಸಲಾಗುತ್ತಿದು ಉಪೇಂದ್ರ ಅವರ ಸಿನಿಮಾ ಹಾಡಿಗೆ ಧ್ವನಿ ನೀಡಿದ್ದಾರೆ ಇದಾದ ನಂತರ ಡ್ರೋಣ್ ಪ್ರಥಮ್ ಸಿನಿಮಾ ನಿರ್ಮಾಣ ಮಾಡಲು ತಯಾರಿ ನಡೆಸುತ್ತಿದ್ದೇವೆ. ತೊಂಬತ್ತರ ದಶಕದಲ್ಲಿ ಬಂದ ಸ್ಕ್ಯಾಮ್ ಚಿತ್ರಗಳಿಂದ ಪ್ರೇರಣೆಗೊಂಡು ಈ ಸಿನಿಮಾ ನಿರ್ಮಾಣವಾಗುತ್ತಿದೆ .ಒಬ್ಬ ವ್ಯಕ್ತಿ ತನ್ನ ಮಾತಿನಿಂದ ಹೇಗೆ ಸಮಾಜವನ್ನು ದಾರಿ ತಪ್ಪಿಸುತ್ತಾರೆ ಎಂಬ ವಿಷಯದ ಹಾಸ್ಯಭರಿತ ಸಿನಿಮಾ ಇದಾಗಿದೆ ಬಿಗ್ ಬಾಸ್ ನಲ್ಲಿ ಗೆದ್ದ ಹಣವನ್ನು ಯೋಧರ ಕುಟುಂಬಗಳಿಗೆ ಅರ್ಪಿಸುವ ನಿಶ್ಚಯ ಮಾಡಲಾಗಿತ್ತು.
ಅದರಂತೆ ನಮ್ಮ ತಂಡದ ಸದಸ್ಯರ ಸಹಕಾರದಿಂದ ಯೋಧರ ಕುಟುಂಬಗಳಿಗೆ ಸಹಾಯ ಮಾಡಿದ ತೃಪ್ತಿ ನನ್ನದಾಗಿದೆ. 75 ವರ್ಷಗಳನ್ನು ಪೂರೈಸಿರುವ ಕನ್ನಡ ಚಿತ್ರರಂಗ ನಮ್ಮೆಲ್ಲರ ಹೆಮ್ಮೆ ಕನ್ನಡ ಸಿನಿಮಾಗಳನ್ನು ಚಿತ್ರಮಂದಿರದಲ್ಲಿಯೇ ನೋಡಿ ಕಲಾವಿದರನ್ನು ಚಿತ್ರರಂಗವನ್ನು ಬೆಳೆಸಿ ಎಂದು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಎ ಎಚ್ ವಿಶ್ವನಾಥ್, ಉಪಾಧ್ಯಕ್ಷ ಟಿ ಆರ್ ಅಶ್ವತ್ಥ್ ನಾರಾಯಣ ಶೆಟ್ಟಿ , ಕಾರ್ಯದರ್ಶಿಗಳಾದ ಎಂ ನಾಗರಾಜ್ ಖಜಾಂಚಿಗಳಾದ ಸಿ ಆರ್ ನಾಗರಾಜ್ ಕುಲಸಚಿವರಾದ ಪ್ರೊ ಹೂವಯ್ಯ ಗೌಡ ಜೆಎನ್ ಎನ್ ಸಿ ಇ ಕಾಲೇಜಿನ ಪ್ರಾಂಶುಪಾಲರಾದ ಡಾ. ಮಂಜುನಾಥ ಪಿ ಎಂಬಿಎ ವಿಭಾಗದ ಮುಖ್ಯಸ್ಥರಾದ ಡಾ ಸಿ ಶ್ರೀಕಾಂತ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.ವಿವಿಧ ಕಾಲೇಜುಗಳ ಸುಮಾರು 140 ಕ್ಕೂ ಹೆಚ್ಚು ಪದವಿ ವಿದ್ಯಾರ್ಥಿಗಳು ಭಾಗವಹಿಸಿದರು ವಿದ್ಯಾರ್ಥಿಗಳಿಗಾಗಿ ಮತ್ತೆ ಹಾಡಿತು ಕೋಗಿಲೆ,ಅವನೇ ಶ್ರೀಮನ್ನಾರಾಯಣ, ಕಿಂದರಿಜೋಗ, ಕಲಾವಿದ, ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.
ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ
ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153