ಅಡುಗೆ ಅನಿಲದ ಬೆಲೆ ಜನಸಾಮಾನ್ಯರ ದಿನಬಳಕೆ ಅಗತ್ಯ ವಸ್ತುಗಳ ಬೆಲೆ *ಕೂಡಲೇ ಇಳಿಸುವಂತೆ ಆಗ್ರಹಿಸಿ ಇಂದು ಶಿಕಾರಿಪುರ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಶಿಕಾರಿಪುರ ವಿಧಾನ ಸಭಾ ಕ್ಷೇತ್ರದ ನಿಕಟಪೂರ್ವ ಅಭ್ಯರ್ಥಿಗಳು ಶಿಕಾರಿಪುರ ಬ್ಲಾಕ್ ಯುವ ಕಾಂಗ್ರೆಸ್ ಅದ್ಯಕ್ಷರಾದ ಗೋಣಿ ಮಾಲತೇಶ್ ರವರ ಹಾಗೂ ಶಿಕಾರಿಪುರ ಬ್ಲಾಕ್ ಯುವ ಕಾಂಗ್ರೆಸ್ ಅದ್ಯಕ್ಷರಾದ ಮಲ್ಲಿಕನಾಯ್ಕ್ ರವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು ಈ *ಸಂದರ್ಭದಲ್ಲಿ ಶಿಕಾರಿಪುರ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರಾದ ಗೋಣಿಮಾಲತೇಶಣ್ಣನವರು ಮಾತನಾಡಿ ಕೇಂದ್ರ ಸರ್ಕಾರ ದಿನೇ ದಿನೇ ಅಡುಗೆ ಅನಿಲ (ಎಲ್‌ಪಿಜಿ ಸಿಲಿಂಡರ್) ಬೆಲೆಯನ್ನು ಹೆಚ್ಚಿಸುತ್ತಿದ್ದು, ಇದರಿಂದ *ಬಡ ಮತ್ತು ಮಧ್ಯಮ ವರ್ಗದವರಿಗೆ *ಹೊರೆಯಾಗುತ್ತಿದೆ. ಕೂಡಲೇ ಅಡುಗೆ ಅನಿಲ ಬೆಲೆಯನ್ನು ಇಳಿಸಬೇಕೆಂದು ಶಿಕಾರಿಪುರ ಬ್ಲಾಕ್ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ಆಗ್ರಹಿಸುತ್ತಿದೆ. ದಿನನಿತ್ಯ ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಹಾಗೂ ಅಂತರರಾಷ್ಟ್ರೀಯ ಮಾರು ಕಟ್ಟೆಯಲ್ಲಿ ಕಚ್ಚಾ ತೈಲಗಳ ಬೆಲೆ ಕಡಿಮೆ ಇದ್ದರೂ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಕೆ ಮಾಡುತ್ತಿರುವ ಜನ ವಿರೋಧಿ ಬಿಜೆಪಿ ಸರ್ಕಾರದ ನೀತಿಯಿಂದ ಜನಸಾಮಾನ್ಯರ ಜೀವನ ತತ್ತರಿಸಿ ಹೋಗಿದೆ.
ದೇಶಕ್ಕೆ ಅಚ್ಚೇ ದಿನ್ ತರುತ್ತೇವೆಂದು ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಅಡುಗೆ ಅನಿಲದ ದರವನ್ನು ದಿನ ನಿತ್ಯ ಏರಿಕೆ ಮಾಡುತ್ತಾ ಮತ್ತೆ ತಿಂಗಳಲ್ಲೇ ಎರಡು ಮೂರು ಬಾರಿ ಅಡುಗೆ ಅನಿಲದ ದರವನ್ನು ಏರಿಕೆ ಮಾಡುತ್ತಾ ಈಗಾಗಲೇ ಕೋವಿಡ್ ಸಂಕಷ್ಟದಲ್ಲಿರುವ ದೇಶದ ಶ್ರೀಸಾಮಾನ್ಯನ ಮೇಲೆ ಬರೆ ಎಳೆಯುತ್ತಿರುವುದು ತೀವ್ರ ಖಂಡನೀಯ.
ಈಗಾಗಲೇ ಹಲವಾರು ರೈತ-ಕಾರ್ಮಿಕ ಜನವಿರೋಧಿ ನೀತಿ ಗಳನ್ನು *ಅನುಷ್ಠಾನಗೊಳಿಸಲು ಹೊರಟಿರುವ ದೇಶದ ಅದು ಮೂರು ವಲಯಗಳನ್ನು ಖಾಸಗೀಕರಣ ಮಾಡಲು ಹೊರ ಟಿರುವ ಹಾಗೂ ಕೋವಿಡ್ ನಿರ್ವಹಣೆಯಲ್ಲಿ ವಿಫಲವಾದ ಈ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಹಲವು ಬಾರಿ ಎಚ್ಚರಿಕೆ *ಸಂದೇಶಗಳನ್ನು ನೀಡಿದೆ *. ಆದರೂ *ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳುತ್ತಿಲ್ಲ ಕೂಡಲೇ ಅಡುಗೆ ಅನಿಲ ಬೆಲೆ ಇಳಿಕೆ ಮಾಡಬೇಕು. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲಬೆಲೆ ಇಳಿಕೆಯಾದಂತೆ ದೇಶದಲ್ಲೂ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡಬೇಕು. ಎಲ್ಲ ಅಗತ್ಯವಸ್ತುಗಳ ಬೆಲೆ ಇಳಿಕೆಗೆ ಕ್ರಮ ಕೈಗೊಳ್ಳಬೇಕು ಎಂದು ಈ ಮೂಲಕ ಶಿಕಾರಿಪುರ ಬ್ಲಾಕ್ ಯುವ ಕಾಂಗ್ರೆಸ್ ಆಗ್ರಹಿಸುತ್ತಿದೆ. ಬೆಲೆ ಇಳಿಕೆಗೆ ಕ್ರಮ ಕೈಗೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ತೀವ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಲಾಯಿತು ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ಭಂಡಾರಿ ಮಾಲತೇಶ್ ರವರು ಹಾಗೂ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳು ಶಿಕಾರಿಪುರ ಪುರಸಭಾ ಸದಸ್ಯರಾದ ನಾಗರಾಜ್ ಗೌಡ್ರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಎಸ್ಟಿ ಘಟಕದ ಅದ್ಯಕ್ಷರಾದ ವೀರೆಶ್ ರವರು ಪುರಸಭಾ ಸದಸ್ಯರಾದ ಗೋಣಿ ಪ್ರಕಾಶ್ ರವರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ನಾಯ್ಕ್ ರವರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಮುಖಂಡರಾದ ಮಾರೊಳ್ಳಿ ಉಮೇಶ್ ರವರು ಸರೇಶ್ ಕಲ್ಮನೆ ರವರು ದೇವಿಂದ್ರಪ್ಪನವರು ಇನ್ನೂ ಮುಂತಾದ ತಾಲೂಕು ಕಾಂಗ್ರೆಸ್ ಸಮಿತಿಯ ವಿವಿಧ ಘಟಕಗಳ ಪದಾಧಿಕಾರಿಗಳು ಯುವ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153