ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರೂಜಿ ಯವರ ಜಯಂತಿ ಆಚರಣೆ ಹಾಗೂ ಜಿಲ್ಲಾ ಕಾರ್ಯಕಾರಿಣಿ ಸಭೆಯು ಜಿಲ್ಲಾ ಅಧ್ಯಕ್ಷ ರಾದ ಮಾಲತೇಶ್ ಸಿ. ಎಚ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಜಿಲ್ಲಾ ಬಿಜೆಪಿ ಪ್ರದಾನ ಕಾರ್ಯದರ್ಶಿ ಗಳಾದ ಬಿ.ಕೆ.ಶ್ರೀನಾಥ್ ರವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತಾಡಿದರು. ವಿಭಾಗ ಸಹ ಸಂಘಟನಾ ಕಾರ್ಯದರ್ಶಿಯಾದ ಎ. ಎನ್.ನಟರಾಜ್ ರವರು ಮಾತನಾಡಿ ಜಿಲ್ಲಾ ಮೋರ್ಚಾ ಹಾಗೂ ಮಂಡಲ ಮೋರ್ಚಾ ಗಳ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಮಾತನಾಡಿದರು. ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಪ್ರದಾನ ಕಾರ್ಯದರ್ಶಿಗಳಾದ ಶಿವರಾಜ್, ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಭಾರಿಗಳಾದ ಕೆ.ಎಸ್.ಅರುಣ್ ಕುಮಾರ್,ಜಿಲ್ಲಾ ಉಪಾಧ್ಯಕ್ಷ ರಾದ ವೆಂಕಟೇಶ್ ನಾಯ್ಡು, ಸುಧಾಕರ್,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಳಾದ ಎಚ್.ಜಿ.ಲೋಕೇಶ್,ಜಿಲ್ಲಾ ಕಾರ್ಯದರ್ಶಿಗಳಾದ ಪ್ರದೀಪ್ ಹೊನ್ನಪ್ಪ, ಡಾ. ತಾನಜಿ, ಹಾಗೂ ಮಂಡಲದ ಅಧ್ಯಕ್ಷರು,ಪ್ರದಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು. ಈ ಸಂಧರ್ಭದಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಸಾಮಾಜಿಕ ಜಾಲತಾಣದ ಸಂಚಾಲಕರಾಗಿ ಸಂತೋಷ್ ಹಾಗೂ ಸಹ ಸಂಚಾಲಕರಾಗಿ ಪವನ್ ಕುಮಾರ್ ಆಯ್ಕೆಯಾದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153