ಕರ್ನಾಟಕ ಸರ್ಕಾರದ ಸುರ್ಪದಿಯಲ್ಲಿದ್ದ ಕಾರ್ಖಾನೆಯಲ್ಲಿ ಇನ್ನಷ್ಟು ಉತ್ತುಂಗ ಸ್ಥಿತಿಗೆ ಕೊಂಡೊಯ್ಯಬಹುದೆಂಬ ದೃಷ್ಟಿಯಿಂದ ಕೇಂದ್ರ ಸರ್ಕಾರದ ಎಸ್ ಎಐಎಲ್ ನಲ್ಲಿ ವಿಲೀನಗೊಳಿಸಲಾಗಿತ್ತು. ಆದರೆ ನಂತರದ ದಿನಗಳಲ್ಲಿ ಕಾರ್ಖಾನೆಯನ್ನು ಉತ್ತುಂಗದ ಸ್ಥಿತಿಗೆ ಕೊಂಡೊಯ್ಯುವ ಬದಲಾಗಿ ನಷ್ಟದಲ್ಲಿ ದೂಡಲಾಗಿದೆ . ಸರ್ಕಾರ ನಷ್ಟದ ನೆಪವೊಡ್ಡಿ ಕಾರ್ಖಾನೆ ಮುಚ್ಚಲು ಹುನ್ನಾರ ನಡೆಸುತ್ತಿರುವುದನ್ನು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ. ಸರ್ಕಾರಿ ಸ್ವಾಮ್ಯದಲ್ಲಿರುವ ಕಾರ್ಖಾನೆಗೆ ಸರ್ಕಾರ ಸ್ವಂತ ಗಣಿ ಒದಗಿಸಲು ಮೀನಮೇಷ ಎಣಿಸುತ್ತಿರುವ ವಲ್ಲದೆ ಹಂತಹಂತವಾಗಿ ಕಾರ್ಖಾನೆಯಲ್ಲಿ ಸ್ಥಗಿತಗೊಳಿಸುವುದಲ್ಲದೆ ಉದ್ಯೋಗಗಳನ್ನು ಕಡಿತಗೊಳಿಸುತ್ತಿವೆ. ಇದು ಕಾರ್ಖಾನೆಯನ್ನು ಸಂಪೂರ್ಣ ಮುಚ್ಚುವ ಹುನ್ನಾರವಾಗಿದೆ. ಐ ಎಸ್ ಎಲ್ ಹಾಗೂ ಎಂಪಿಎಂ ಕಾರ್ಖಾನೆಯಿಂದಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಉದ್ಯೋಗವಕಾಶಗಳ ಸೇವಾ ಕೇಂದ್ರ ಸ್ಥಾಪನೆಗೆ ಪೂರಕವಾದ ಬೇರೆ ಬೇರೆ ಉದ್ಯಮಗಳು ಬೆಳೆದು ಬಂದಿದ್ದವು. ಆದರೆ ಇದೀಗ ಅವಲಂಬಿತ ಎಲ್ಲ ಉದ್ಯಮಗಳು ನೆಲಕಚ್ಚಿವೆ ಆರ್ಥಿಕ ಚಟುವಟಿಕೆ ಕುಂಠಿತಗುತ್ತಿದೆ. ಕೇಂದ್ರ ಸರಕಾರ ಕೂಡಲೇ ವಿಐಎಸ್ಎಲ್ ಹಾಗೂ ಎಂಪಿಎಂ ಕಾರ್ಖಾನೆಯ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಬೇಕು ಕಾರ್ಖಾನೆಗೆ ಸ್ವಂತ ಗಣ ಒದಗಿಸುವುದರ ಜತೆಗೆ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲಿ ಉಳಿಸಿಕೊಂಡು ಹೆಚ್ಚಿನ ಉದ್ಯೋಗಾವಕಾಶ ಸೃಷ್ಟಿಸುವ ಮೂಲಕ ಜಿಲ್ಲೆಯ ಆರ್ಥಿಕ ಪ್ರಗತಿಗೆ ಸಹಕರಿಸಬೇಕೆಂದು ಪ್ರದೇಶ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಸಾರ್ವಜನಿಕರೊಂದಿಗೆ ಹಾಗೂ ಎಂಪಿಎಂ ಉಳಿವಿಗಾಗಿ ನಡೆಸುತ್ತಿದ್ದೇವೆ. ಐಎಸ್ ಎಲ್ ಹಾಗೂ ಎಂಪಿಎಂ ಉಳಿವಿಗೆ ಕ್ರಮ ಕೈಗೊಳ್ಳದಿದ್ದಲ್ಲಿ ವಿಐಎಸ್ ಎಲ್ ಕಾರ್ಖಾನೆಯ ಉಳಿವಿಗಾಗಿ ನಡೆಯುತ್ತಿರುವ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುತ್ತೇವೆ ಎಂದು ಈ ಮೂಲಕ ತಿಳಿಸುತ್ತಾರೆ.
ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ
ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153