ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ತುಂಬುತ್ತಿದೆ. ರೈಲ್ವೆ ರಸ್ತೆ ವಿದ್ಯುನ್ಮಾನ ತಂತ್ರಜ್ಞಾನ ಮುಂತಾದ ಅನೇಕ ಕ್ಷೇತ್ರಗಳಲ್ಲಿ ಪ್ರಗತಿಯನ್ನು ಸಾಧಿಸಿ ಮಂಗಳನ ಅಂಗಳದ ವರೆಗೂ ತಲುಪಿದೆ. ಜೀವನಕ್ಕೆ ಅತ್ಯವಶ್ಯಕವಾಗಿ ಬೇಕಾದ ಆಹಾರವನ್ನು ಉತ್ಪಾದಿಸುವ ಕೃಷಿ ಕ್ಷೇತ್ರವು ಇಂದು ದುಃಸ್ಥಿತಿಯತ್ತ ಸಾಗುತ್ತಿದೆ. 1990 ರ ದಶಕದಿಂದ 3.5 ಲಕ್ಷಕ್ಕೂ ಅಧಿಕ ರೈತರು ಆತ್ಮಹತ್ಯೆಯ ದಾರಿ ಹಿಡಿದಿದ್ದಾರೆ. ಪ್ರತಿವರ್ಷ ಕೃಷಿ ತ್ಯಜಿಸಿ ನಗರದತ್ತ ಸಾಗುತ್ತಿರುವ ಸಂಖ್ಯೆ ಗಣನೀಯವಾಗಿ ಏರುತ್ತಿದೆ. ರೈತರು ತಾವು ಬೆಳೆದ ಬೆಳೆಗಳ ಒಳಸುರಿಗಳ ವೆಚ್ಚ ಅಧಿಕವಾಗಿ ಪ್ರಕೃತಿ ವಿಕೋಪದಿಂದ ನಷ್ಟವುಂಟಾಗಿ ಮತ್ತು ಲಾಭದಾಯಕ ಬೆಲೆ ಸಿಗದ ಕಾರಣ ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ‘ಬೇರೆ ಕ್ಷೇತ್ರಗಳ ಉತ್ಪಾದಕರು ತಾವು ಉತ್ಪಾದಿಸಿದ ಉತ್ಪನ್ನಗಳಿಗೆ ತಾವೇ ದರ ನಿಗದಿಪಡಿಸಿದ್ದಾರೆ’. ಆದರೆ ರೈತನಿಗೆ ಮಾತ್ರ ಇದು ಸಾಧ್ಯ ವಾಗುತ್ತಿಲ್ಲ. ಮತ್ಯಾರೋ ದರ ನಿಗದಿ ಮಾಡುತ್ತಿದ್ದಾರೆ. ಇದೇ ಪರಿಸ್ಥಿತಿ ಹೀಗೆ ಮುಂದುವರೆದರೆ ಕೃಷಿಕ್ಷೇತ್ರ ಅವನತಿಗೊಂಡು ಆಹಾರದ ಅಭಾವ ಉಂಟಾಗುತ್ತದೆ. ಈ ವ್ಯವಸ್ಥೆ ಸರಿಯಾಗಬೇಕಾದರೆ ರೈತರಿಗೆ ಉತ್ಪನ್ನ ವೆಚ್ಚದ ಆಧಾರದ ಮೇಲೆ’ ಲಾಭದಾಯಕ ಬೆಲೆ’ ದೊರೆಯುವಂತಾಗಬೇಕು. ರೈತರ ಆದಾಯ ದ್ವಿಗುಣವಾಗಬೇಕೆಂಬುದು ಸರ್ಕಾರದ ಒಳ್ಳೆಯ ಚಿಂತನೆಯೇ ಸರಿ. ಆದರೆ ಸರ್ಕಾರ ಕೇವಲ ಕನಿಷ್ಠ ಬೆಂಬಲ ಬೆಲೆಯನ್ನು(MSP) ಘೋಷಿಸಿದರೆ ಸಾಲದು. ರೈತರ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ಘೋಷಿಸಿ ಖರೀದಿ ಗ್ಯಾರಂಟಿ ನೀಡಿ ಘೋಷಿತ ಬೆಲೆಗಳಿಗಿಂತ ಕಡಿಮೆ ಬೆಲೆಗೆ ಖರೀದಿಯಾಗಬಾರದು. ಅಖಿಲ ಭಾರತ ಮಟ್ಟದ ಸಭೆಯಲ್ಲಿ ಕೈಗೊಂಡಿರುವ ನಿರ್ಣಯ ಗಳು ಮತ್ತು ಪ್ರಧಾನ ಮಂತ್ರಿಯವರಿಗೆ ಒತ್ತಾಯಿಸುತ್ತಿರುವ ಪ್ರಮುಖ ಅಂಶಗಳು : * MSP ಅಲ್ಲ ಲಾಭದಾಯಕ ಬೆಲೆ ನಿಗದಿಯಾಗಲಿ.

ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ತುಂಬುತ್ತಿದೆ. ರೈಲ್ವೆ ರಸ್ತೆ ವಿದ್ಯುನ್ಮಾನ ತಂತ್ರಜ್ಞಾನ ಮುಂತಾದ ಅನೇಕ ಕ್ಷೇತ್ರಗಳಲ್ಲಿ ಪ್ರಗತಿಯನ್ನು ಸಾಧಿಸಿ ಮಂಗಳನ ಅಂಗಳದ ವರೆಗೂ ತಲುಪಿದೆ. ಜೀವನಕ್ಕೆ ಅತ್ಯವಶ್ಯಕವಾಗಿ ಬೇಕಾದ ಆಹಾರವನ್ನು ಉತ್ಪಾದಿಸುವ ಕೃಷಿ ಕ್ಷೇತ್ರವು ಇಂದು ದುಃಸ್ಥಿತಿಯತ್ತ ಸಾಗುತ್ತಿದೆ. 1990 ರ ದಶಕದಿಂದ 3.5 ಲಕ್ಷಕ್ಕೂ ಅಧಿಕ ರೈತರು ಆತ್ಮಹತ್ಯೆಯ ದಾರಿ ಹಿಡಿದಿದ್ದಾರೆ. ಪ್ರತಿವರ್ಷ ಕೃಷಿ ತ್ಯಜಿಸಿ ನಗರದತ್ತ ಸಾಗುತ್ತಿರುವ ಸಂಖ್ಯೆ ಗಣನೀಯವಾಗಿ ಏರುತ್ತಿದೆ. ರೈತರು ತಾವು ಬೆಳೆದ ಬೆಳೆಗಳ ಒಳಸುರಿಗಳ ವೆಚ್ಚ ಅಧಿಕವಾಗಿ ಪ್ರಕೃತಿ ವಿಕೋಪದಿಂದ ನಷ್ಟವುಂಟಾಗಿ ಮತ್ತು ಲಾಭದಾಯಕ ಬೆಲೆ ಸಿಗದ ಕಾರಣ ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ‘ಬೇರೆ ಕ್ಷೇತ್ರಗಳ ಉತ್ಪಾದಕರು ತಾವು ಉತ್ಪಾದಿಸಿದ ಉತ್ಪನ್ನಗಳಿಗೆ ತಾವೇ ದರ ನಿಗದಿಪಡಿಸಿದ್ದಾರೆ’. ಆದರೆ ರೈತನಿಗೆ ಮಾತ್ರ ಇದು ಸಾಧ್ಯ ವಾಗುತ್ತಿಲ್ಲ. ಮತ್ಯಾರೋ ದರ ನಿಗದಿ ಮಾಡುತ್ತಿದ್ದಾರೆ. ಇದೇ ಪರಿಸ್ಥಿತಿ ಹೀಗೆ ಮುಂದುವರೆದರೆ ಕೃಷಿಕ್ಷೇತ್ರ ಅವನತಿಗೊಂಡು ಆಹಾರದ ಅಭಾವ ಉಂಟಾಗುತ್ತದೆ. ಈ ವ್ಯವಸ್ಥೆ ಸರಿಯಾಗಬೇಕಾದರೆ ರೈತರಿಗೆ ಉತ್ಪನ್ನ ವೆಚ್ಚದ ಆಧಾರದ ಮೇಲೆ’ ಲಾಭದಾಯಕ ಬೆಲೆ’ ದೊರೆಯುವಂತಾಗಬೇಕು. ರೈತರ ಆದಾಯ ದ್ವಿಗುಣವಾಗಬೇಕೆಂಬುದು ಸರ್ಕಾರದ ಒಳ್ಳೆಯ ಚಿಂತನೆಯೇ ಸರಿ. ಆದರೆ ಸರ್ಕಾರ ಕೇವಲ ಕನಿಷ್ಠ ಬೆಂಬಲ ಬೆಲೆಯನ್ನು(MSP) ಘೋಷಿಸಿದರೆ ಸಾಲದು. ರೈತರ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ಘೋಷಿಸಿ ಖರೀದಿ ಗ್ಯಾರಂಟಿ ನೀಡಿ ಘೋಷಿತ ಬೆಲೆಗಳಿಗಿಂತ ಕಡಿಮೆ ಬೆಲೆಗೆ ಖರೀದಿಯಾಗಬಾರದು.ಈ ವಿಷಯ ಸಂಬಂಧ ದಿನಾಂಕ : 7ಮತ್ತು 8ಆಗಸ್ಟ್ 2021 ರಂದು ಹರಿಯಾಣ ರಾಜ್ಯದ ಸೋನಿಪತ್ ಜಿಲ್ಲೆಯ ಚಿಂಚೋಳಿ ಗ್ರಾಮದಲ್ಲಿ ನಡೆದ ಅಖಿಲ ಭಾರತೀಯ ಪ್ರಬಂಧ ಸಮಿತಿ ಸಭೆಯಲ್ಲಿ ಎಲ್ಲ ರಾಜ್ಯಗಳ ಪ್ರತಿನಿಧಿಗಳು ಸೇರಿ ಸುದೀರ್ಘವಾಗಿ ಚರ್ಚಿಸಲಾಯಿತು. ರೈತ ಗೌರವಾಯುತ ಜೀವನ ನಡೆಸಬೇಕಾದರೆ ರೈತರ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ಘೋಷಿಸಿ ಖರೀದಿಸ ಬೇಕೆಂದು ಮಾನ್ಯ ಪ್ರಧಾನ ಮಂತ್ರಿಗಳನ್ನು ಒತ್ತಾಯಿಸಲು ದೇಶದ ಎಲ್ಲ ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಸೆಪ್ಟೆಂಬರ್ 8, 2021ರಂದು ಧರಣಿ ಸತ್ಯಾಗ್ರಹ ನಡೆಸಿ ಮನವಿ ಸಲ್ಲಿಸುವಂತೆ ತೀರ್ಮಾನಿಸಲಾಗಿದೆ. ಅಖಿಲ ಭಾರತ ಮಟ್ಟದ ಸಭೆಯಲ್ಲಿ ಕೈಗೊಂಡಿರುವ ನಿರ್ಣಯ ಗಳು ಮತ್ತು ಪ್ರಧಾನ ಮಂತ್ರಿಯವರಿಗೆ ಒತ್ತಾಯಿಸುತ್ತಿರುವ ಪ್ರಮುಖ ಅಂಶಗಳು :

1.”MSP ಅಲ್ಲ ಲಾಭದಾಯಕ ಬೆಲೆ ನಿಗದಿಯಾಗಲಿ.

  1. ಪ್ರತಿವರ್ಷ ಬೆಲೆ ಘೋಷಣೆಯ ಹಣದುಬ್ಬರ (Inflation rate )ದರಕ್ಕೆ ಅನುಗುಣವಾಗಿರಲಿ.
  2. ಮಂಡಿ ಒಳಗೆ ಅಥವಾ ಹೊರಗೆ ಘೋಷಿತ ಬೆಲೆಗಿಂತ ಕಡಿಮೆ ದರದಲ್ಲಿ ಖರೀದಿಸಿದರೆ ಶಿಕ್ಷಾರ್ಹವಾಗಿರಬೇಕು.
    ಈ ಮೇಲ್ಕಂಡ ಅಂಶಗಳನ್ನು ಕಠಿಣ ಕಾನೂನು ರೂಪಿಸುವುದರ ಮೂಲಕ ಜಾರಿಗೊಳಿಸಬೇಕೆಂದು ಆಗ್ರಹಿಸಿ ತಮ್ಮ ಮೂಲಕ ಗೌರವಿತ ಪ್ರಧಾನ ಮಂತ್ರಿಗಳಿಗೆ ಒತ್ತಾಯಿಸುತ್ತೇವೆ. ಇಲ್ಲದಿದ್ದರೆ ಭಾರತೀಯ ಕಿಸಾನ್ ಸಂಘವು ಮುಂಬರುವ ಅಧಿವೇಶನದಲ್ಲಿ ಸಂಸದರ ಮೂಲಕ ಒತ್ತಡ ಹೇರಿ ಖಾಸಗಿ ಬಿಲ್ ಮಂಡಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153