ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಗುಡುಮಘಟ್ಟೆ ಗ್ರಾಮದಲ್ಲಿ 30 ಲಕ್ಷ ವೆಚ್ಚದ ಷಟಲ್ ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣವನ್ನು ಗ್ರಾಮಾಂತರ ಶಾಸಕರಾದ ಶ್ರೀ ಕೆ.ಬಿ. ಅಶೋಕ ನಾಯ್ಕ ರವರು ಸ್ವತಃ ಷಟಲ್ ಬ್ಯಾಡ್ಮಿಂಟನ್ ಆಟ ಆಡುವುದರ ಮೂಲಕ ಉದ್ಘಾಟಿಸಿದರು. ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚಿನ ಅನುದಾನವನ್ನು ಶೈಕ್ಷಣಿಕ ಹಾಗೂ ಕ್ರೀಡಾ ಕ್ಷೇತ್ರಕ್ಕಾಗಿ ಒದಗಿಸಿಲು ಶ್ರಮಿಸಿದ್ದೇನೆ. ಈ ಭಾಗದ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಇದರೊಟ್ಟಿಗೆ ಕ್ರೀಡೆಗೂ ಉತ್ತೇಜನ ನೀಡುವ ಸಲುವಾಗಿ ಕ್ಷೇತ್ರದ ಕ್ರೀಡಾಸಕ್ತರಿಗೆ ಅವಶ್ಯ ಸೌಲಭ್ಯ ಕಲ್ಪಿಸಲಾಗಿದೆ. ಸುಸಜ್ಜಿತ ಒಳಾಂಗಣ ಕ್ರೀಡಾಂಗಣ ನಿರ್ಮಾಣ ಮಾಡಲಾಗಿದೆ. ಇಲ್ಲಿ ಶಿಕ್ಷಣದ ಜೊತೆಗೆ ಕ್ರೀಡೆಗೂ ಹೆಚ್ಚಿನ ಪ್ರೋತ್ಸಾಹ ನೀಡಲಾಗುವುದು ಎಂದರು. ಇಲ್ಲಿ ಹೊರಹೊಮ್ಮುವ ಪ್ರತಿಭೆಗಳು ರಾಜ್ಯ,ರಾಷ್ಟ್ರಮಟ್ಟವನ್ನು ಪ್ರತಿನಿಧಿಸಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪುಟ್ಟಪ್ಪ, ಕ್ರಾಂತಿಕಾರಿ ಭಗತ್ ಸಿಂಗ್ ವೇದಿಕೆಯ ಅಧ್ಯಕ್ಷರಾದ ದಯಾನಂದ್ ಹಾಗೂ ಗ್ರಾಮಸ್ಥರು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153