ದೇಶದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದ್ದು ದಿನನಿತ್ಯ ನಡೆಯುತ್ತಿರುವ ಮಕ್ಕಳು ಮತ್ತು ಯುವತಿಯರ ಮೇಲೆ ಅತ್ಯಾಚಾರ ಪ್ರಕರಣಗಳೇ ಇದಕ್ಕೆ ಸಾಕ್ಷಿ ಎಂದು ಶಿವಮೊಗ್ಗ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ ಆತಂಕ ವ್ಯಕ್ತಪಡಿಸಿದ್ದಾರೆ. ಹೈದ್ರಾಬಾದಿನಲ್ಲಿ ದಿಶಾ ಘಟನೆ ಮಾಸುವ ಮುನ್ನವೇ ಇದೀಗ ಹೈದ್ರಾಬಾದ್ ಸಮೀಪ ಸೈದಾಬಾದ್ ಸಿಂಗರಣಿ ಕಾಲೋನಿಯಲ್ಲಿ ಕಾಮುಕನೊಬ್ಬ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಸಾಯಿಸಿರುವ ಘಟನೆ ದೇಶದ ಜನತೆಯನ್ನೇ ಬೆಚ್ಚಿ ಬೀಳಿಸಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ ಇದೇ ಹೈದರಾಬಾದಿನಲ್ಲಿ ಕಳೆದ ವರ್ಷ ನಡೆದ ಪಶುವೈದ್ಯೆ ದಿಶಾ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇನ್ನೂ ಮಾಸುವ ಮುನ್ನವೇ ಸೈದಾಬಾದ್ ನಲ್ಲಿ ಏನೂ ಅರಿಯದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಸಾಯಿಸಿರುವ ಘಟನೆ ಅತ್ಯಂತ ನೋವುಂಟು ಮಾಡಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.ಇನ್ನು ಇತ್ತೀಚೆಗೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿಯ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಇಡೀ ರಾಜ್ಯದ ಜನತೆಯನ್ನೇ ಬೆಚ್ಚಿ ಬೀಳುತ್ತಿತ್ತು ಇಂತಹ ಘಟನೆಗಳು ಪದೇ ಪದೇ ಮರುಕಳಿಸುತ್ತಿರುವುದರಿಂದ ಮಕ್ಕಳು ಯುವತಿಯರು ಮಹಿಳೆಯರು ಮನೆಯಿಂದ ಹೊರಗೆ ಓಡಾಡುವುದಕ್ಕೆ ಹೆದರುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ತಿಳಿಸಿದ್ದಾರೆ ಕೇಂದ್ರ ಸರ್ಕಾರ ಕೂಡಲೇ ಮಕ್ಕಳು ಮಹಿಳೆಯರು ರಕ್ಷಣೆ ನೀಡುವ ಕಾನೂನುಗಳನ್ನು ಮತ್ತಷ್ಟು ಬಿಗಿಗೊಳಿಸಬೇಕು ದಿಶಾ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರು ಗುಂಡಿಕ್ಕಿ ಸಾಯಿಸಿದ ರೀತಿಯಲ್ಲಿ ಅತ್ಯಾಚಾರ ಎಸಗಿದವರೆಲ್ಲ ಗಲ್ಲಿಗೇರಿಸಲು ಆದೇಶ ನೀಡಬೇಕು ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು ಎಂದು ಯಮುನಾ ರಂಗೇಗೌಡ ಆಗ್ರಹಿಸಿದ್ದಾರೆ.
ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ
ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153