- ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಎಲ್ಲ ಗ್ರಾಮಗಳಿಗೂ ಬಸ್ ಸೇವೆ ಪುನರಾರಂಭಿಸಿ : ಶಾಲಾ ಕಾಲೇಜುಗಳು ಆರಂಭವಾಗಿ ವಿದ್ಯಾರ್ಥಿಗಳು ಕಲಿಕೆಯ ಕಡೆಗೆ ಉತ್ಸಾಹದಿಂದ ಗಮನ ಹರಿಸಿದ್ದಾರೆ ಕೋವಿಡ್ ಕಾರಣಕ್ಕೆ ಬದಲಾದ ತರಗತಿಗಳ ಸಮಯಕ್ಕೆ ಹಾಜರಾಗಲು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸಾಧ್ಯವಾಗುತ್ತಿಲ್ಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕೆಎಸ್ ಆರ್ ಟಿಸಿ ಎಲ್ಲಾ ಬಸ್ಸುಗಳು ಸೇವೆ ಒದಗಿಸುತ್ತಿದೆ ಆದರೂ ಲಾಕ್ ಡೌನ್ ಕಾರಣಕ್ಕೆ ಸ್ಥಗಿತಗೊಂಡಿದ್ದ ಸಾರಿಗೆ ಸೇವೆ ಕೆಲ ಹಳ್ಳಿಗಳಲ್ಲಿ ಇನ್ನೂ ಪುನರಾರಂಭವಾಗಿಲ್ಲ ದಿನಕ್ಕೆ 1ಅಥವಾ 2ಬಸ್ಸುಗಳು ಮಾತ್ರ ಸಂಚರಿಸುತ್ತಿವೆ.ಇದರಿಂದಾಗಿ ರಾಜ್ಯದ ಗ್ರಾಮೀಣ ಭಾಗದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಸಾರಿಗೆ ಸಂಚಾರಿ ತೊಂದರೆಯಾಗಿ ಪರಿಣಮಿಸಿದೆ.
- ಶಿಷ್ಯವೇತನವನ್ನು ತಕ್ಷಣಕ್ಕೆ ಬಿಡುಗಡೆಗೊಳಿಸಿ: ಡಿಪ್ಲೊಮಾ ಇಂಜಿನಿಯರಿಂಗ್ ಸ್ನಾತಕೋತ್ತರ ತರಗತಿಗಳಲ್ಲಿ ಮತ್ತು ಪಿ ಎಚ್ ಡಿ ಮಾಡುತ್ತಿರುವ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಪೂರ್ಣ ಪ್ರಮಾಣದಲ್ಲಿ ಶಿಷ್ಯ ವೇತನ ಪಡೆಯದೆ ಪರದಾಡುವಂತಾಗಿದೆ ರಾಜ್ಯ ಸರ್ಕಾರ ಈ ಎಲ್ಲಾ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದಲ್ಲಿ ವಿದ್ಯಾಸಿರಿ ಶಿಷ್ಯವೇತನ ಸೇರಿದಂತೆ ಎಲ್ಲಾ ವಿದ್ಯಾರ್ಥಿ ವೇತನವನ್ನು ತಕ್ಷಣಕ್ಕೆ ಬಿಡುಗಡೆಗೊಳಿಸಬೇಕೆಂದು ಮತ್ತು ವಿದ್ಯಾರ್ಥಿಗಳ ಅಧ್ಯಯನಕ್ಕೆ ಪ್ರೋತ್ಸಾಹಿಸಲು ವಿದ್ಯಾರ್ಥಿ ವೇತನ ಮೊತ್ತವನ್ನು ಹೆಚ್ಚಿಗೆ ಮಾಡಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸರ್ಕಾರಕ್ಕೆ ಆಗ್ರಹಿಸುತ್ತದೆ.
- ಹಾಸ್ಟೆಲ್ ಗಳನ್ನು ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಪ್ರಾರಂಭಿಸಿ: ರಾಜ್ಯದ ಅನೇಕ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಹಾಸ್ಟೆಲ್ ಗಳಿಗೆ ಅವಲಂಬಿತ ರಾಗಿರುವುದರಿಂದ ರಾಜ್ಯದ ಹಿಂದುಳಿದ ವರ್ಗ ಸಮಾಜ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಇಲಾಖೆಗಳ ವ್ಯಾಪ್ತಿಗೆ ಬರುವ ವಸತಿ ನಿಲಯಗಳ ಸಂಖ್ಯೆಗೆ ಮತ್ತು ವಸತಿ ನಿಲಯಗಳಿಗೆ ಪ್ರವೇಶ ಬಯಸಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಸಂಖ್ಯೆಗೆ ತುಂಬಾ ಅಂತರವಿದೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಹಿತದೃಷ್ಟಿಯಲ್ಲಿ ಸರ್ಕಾರ ತಕ್ಷಣಕ್ಕೆ ವಸತಿ ನಿಲಯಗಳ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಬೇಕು ಮತ್ತು ಕರ್ನಾಟಕದಲ್ಲಿ ಸುಮಾರು ಈ ವರ್ಷ 15ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಹಾಸ್ಟೆಲ್ ಗಳಲ್ಲಿ ಪ್ರವೇಶ ಪಡೆಯಲು ಅರ್ಜಿ ಸಲ್ಲಿ ಸುವ ಸಂಭವವಿದ್ದು ಆದರೆ ಕಳೆ ದ ವರ್ಷ ಪ್ರಕಾರ ಕೇವಲ ಎರಡೂವರೆ ಲಕ್ಷ ವಿದ್ಯಾರ್ಥಿಗಳಿಗೆ ಮಾತ್ರ ವಸತಿ ನಿಲಯಗಳಲ್ಲಿ ಪ್ರವೇಶ ಪಡೆಯಲು ಅವಕಾಶವಿದ್ದು ಇನ್ನುಳಿದ ಹನ್ನೊಂದು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಹಾಸ್ಟೆಲ್ ಸೌಲಭ್ಯದಿಂದ ವಂಚಿತರಾಗಿ ಕುತ್ತಿದ್ದು ಸರ್ಕಾರ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಪ್ರಸಕ್ತ ವರ್ಷದ ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಹಾಸ್ಟೆಲ್ ಗಳನ್ನು ತೆರೆಬೇಕಾಗಿದೆ ಮತ್ತು ಹಾಸ್ಟೆಲ್ ಗಳಲ್ಲಿ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕಾಗಿದೆ.ಈ ಸಂದರ್ಭದಲ್ಲಿ ಸಿಂಧು, ತೇಜಸ್ವಿನಿ ,ಸಂಧ್ಯಾ, ಅಮೃತಾ, ಸ್ವಾತಿ, ಇನ್ನಿತರ ವಿದ್ಯಾರ್ಥಿಗಳು ಹಾಜರಿದ್ದರು.
ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ
ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153