ನಾಮಪತ್ರ ಹಿಂಪಡೆಯಲು ಲಂಚ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ಸೆ.16ರಂದು ಕಾಸರಗೋಡು ಕ್ರೈಂ ಬ್ರಾಂಚ್ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಎಪ್ರಿಲ್ ನಲ್ಲಿ ನಡೆದ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಮಂಜೇಶ್ವರದ ಬಿಎಸ್ಪಿ ಅಭ್ಯರ್ಥಿಯಾಗಿದ್ದ ಕೆ.ಸುಂದರ ಅವರನ್ನು ಕಣದಿಂದ ಹಿಂದಕ್ಕೆ ಸರಿಯಲು ಗೆದ್ದರೆ ಮಂಗಳೂರಿನಲ್ಲಿ ವೈನ್ ಶಾಪ್ ನೀಡುವುದಾಗಿ ಎರಡು ಲಕ್ಷ ರೂ. ನಗದು ಹಾಗೂ ಮೊಬೈಲ್ ಫೋನ್, ನೀಡಿದ್ದಾಗಿ ಇದಲ್ಲದೆ ಇನ್ನಿತರ ಅಮಿಷ ನೀಡಿದ್ದಾಗಿ ಪೊಲೀಸ್ ದೂರು ದಾಖಲಾಗಿದೆ. ಯುವ ಮೋರ್ಚಾ ರಾಜ್ಯ ಮುಖಂಡ ಸುನೀಲ್ ನಾಯ್ಕ್ ಹಾಗೂ ಪಕ್ಷದ ಇತರ ಪ್ರಮುಖರು ಮಾರ್ಚ್ 21ರಂದು ಸುಂದರ ಅವರ ಕಾಸರಗೋಡಿನ ಪೆರ್ಲದಲ್ಲಿರುವ ಮನೆಗೆ ತರೆಳಿ ನಗದು ಹಾಗೂ ಸ್ಮಾರ್ಟ್ ಫೋನ್ ನೀಡಿದ್ದಲ್ಲದೆ, ಸುರೇಂದ್ರನ್ ಗೆದ್ದಲ್ಲಿ ಮಂಗಳೂರಿನಲ್ಲಿ ಬಾರ್ ಲೈಸೆನ್ಸ್ ಹಾಗೂ ಇನ್ನಿತರ ಆಮಿಷವೊಡ್ಡಿದ್ದರು ಎಂದು ಚುನಾವಣೆ ಕಳೆದು ಒಂದು ತಿಂಗಳ ಬಳಿಕ ಸುಂದರ ಬಹಿರಂಗಪಡಿಸಿದ್ದರು. ಈ ಸಂಬಂಧ ಮಂಜೇಶ್ವರದ ಸಿಪಿಎಂ ಅಭ್ಯರ್ಥಿಯಾಗಿದ್ದ ವಿ.ವಿ.ರಮೇಶನ್ ಪೊಲೀಸ್ ದೂರು ಸಲ್ಲಿಸಿದ್ದರು. ಅದರಂತೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದರು. ಬಳಿಕ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದ ಆದೇಶದಂತೆ ಕೆ.ಸುರೇಂದ್ರನ್ ವಿರುದ್ಧ ಮೊಕದ್ದಮೆ ದಾಖಲಾಗಿತ್ತು. ತನಿಖೆಯನ್ನು ಬದಿಯಡ್ಕ ಪೊಲೀಸರಿಂದ ಕ್ರೈಂ ಬ್ರಾಂಚ್ ಗೆ ವರ್ಗಾಯಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಯುವ ಮೋರ್ಚಾ ರಾಜ್ಯ ಮುಖಂಡ ಸುನೀಲ್ ನಾಯ್ಕ್, ಬಿಜೆಪಿ ಜಿಲ್ಲಾ ಮುಖಂಡರಾದ ಮಣಿಕಂಠ ರೈ, ವಿ.ಬಾಲಕೃಷ್ಣ ಶೆಟ್ಟಿ ಹಾಗೂ ಇನ್ನಿತರ ಮುಖಂಡರನ್ನು ಕ್ರೈಂ ಬ್ರಾಂಚ್ ತನಿಖೆಗೊಳಪಡಿಸಿತ್ತು. ಇದೀಗ ರಾಜ್ಯಾಧ್ಯಕ್ಷ ಕೆ. ಸುರೇಂದ್ರ ನ್ ರನ್ನು ತನಿಖೆಗೊಳಪಡಿಸಲು ತೀರ್ಮಾನಿಸಿದ್ದು ಇಂದು ಕಾಸರಗೋಡಿನ ಕ್ರೈಂ ಬ್ರಾಂಚ್ ಕಚೇರಿಗೆ ತನಿಖೆಗೆ ಆಗಮಿಸಿದ್ದಾರೆ.
ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ
ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153