ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಹೆಚ್ಚಿನ ಸೇವಾ ಚಟುವಟಿಕೆಗಳಲ್ಲಿ ತೊಡಗಿಸುತ್ತಿರುವ ಕಾರ್ಯ ಅಭಿನಂದನೀಯ ಎಂದು ಇನ್ನರ್‌ವ್ಹೀಲ್ ಜಿಲ್ಲಾ ಚರ‍್ಮನ್ ಪುಷ್ಪಾ ಗುರುರಾಜ್ ಹೇಳಿದರು.
ಇನ್ನರ್‌ವ್ಹೀಲ್ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆಗೆ ಭೇಟಿ ನೀಡಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸ್ನೇಹ, ಪ್ರೀತಿಯ ಜತೆಗೆ ಸೇವೆಗೆ ಹೆಚ್ಚು ಮಹತ್ವ ನೀಡುತ್ತಿರುವ ಇನ್ನರ್‌ವ್ಹೀಲ್ ಸಂಸ್ಥೆ ಅವೀಸ್ಮರಣೀಯ. ಇನ್ನರ್‌ವ್ಹೀಲ್ ಸಂಸ್ಥೆ 9 ರೆವಿನ್ಯೂ ಜಿಲ್ಲೆಗಳಲ್ಲಿ ನಿರಂತರವಾಗಿ ಸೇವಾ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದೆ ಎಂದು ತಿಳಿಸಿದರು.
ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಇನ್ನರ್‌ವ್ಹೀಲ್ ಕ್ಲಬ್ ಸೇರಿಕೊಂಡು ಸಂಸ್ಥೆ ಬಲಪಡಿಸಬೇಕು. ಸಾಮಾಜಿಕ ಹಾಗೂ ಸೇವಾ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಬಡ ಮತ್ತು ಮಧ್ಯಮ ವರ್ಗದಲ್ಲಿ ಸಂಕಷ್ಟದಲ್ಲಿರುವ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗುವ ಸೇವಾ ಕಾರ್ಯಗಳಿಗೆ ಕೈಜೋಡಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ನಮಿತಾ ಸೂರ್ಯನಾರಾಯಣ, ವೀಣಾ ಹರ್ಷ ಅವರು ದತ್ತು ಸ್ವೀಕಾರ ಮಾಡಿ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಸಂಪೂರ್ಣ ವೆಚ್ಚವನ್ನು ಭರಿಸಿದರು.
ಇದೇ ಸಂದರ್ಭದಲ್ಲಿ ಬಡವಿದ್ಯಾರ್ಥಿಗೆ ಆನ್‌ಲೈನ್ ಶಿಕ್ಷಣಕ್ಕೆ ಶಬರಿ ಕಡಿದಾಳ್ ಅವರು ಹೊಸ ಸ್ಮಾರ್ಟ್ ಫೋನ್‌ಅನ್ನು ದೇಣಿಗೆ ನೀಡಿದರು. ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ಅಧ್ಯಕ್ಷ ಮಂಜುನಾಥ್ ಕದಂ ಅವರು ಇನ್ನರ್‌ವ್ಹೀಲ್ ಮುಖವಾಣಿ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದರು.
ಇನ್ನರ್‌ವ್ಹೀಲ್ ಕ್ಲಬ್ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಜಯಂತಿ ವಾಲಿ ಅಧ್ಯಕ್ಷತೆ ವಹಿಸಿ ವಿವಿಧ ಆಟೋಟಗಳಲ್ಲಿ ವಿಜೇತರಾದ ಸದಸ್ಯನಿಯರಿಗೆ ಬಹುಮಾನ ನೀಡಿ ಗೌರವಿಸಿದರು.
ಇನ್ನರ್‌ವ್ಹೀಲ್ ಕ್ಲಬ್ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಬಿಂದು ವಿಜಯ್‌ಕುಮಾರ್, ಜಿಲ್ಲಾ ಮಾಜಿ ಚರ‍್ಮನ್ ವಾರಿಜಾ ಜಗದೀಶ್, ಭಾರತೀ ಚಂದ್ರಶೇಖರ್, ಸುಧಾ ಪ್ರಸಾದ್, ಜಿಲ್ಲಾ ಸಂಪಾದಕ ಶಬರಿ ಕಡಿದಾಳ್, ಮಮತಾ ಸುಧೀಂದ್ರ, ವೀಣಾ ಹರ್ಷ, ನಮಿತಾ ರಾಜೇಶ್ವರಿ, ವಾಣಿ, ಉಮಾ ವೆಂಕಟೇಶ್, ಸುಮಾ ರವಿ, ಆಶಾ ಶ್ರೀಕಾಂತ್, ಸುಜಯಾ ಪುರುಷೋತ್ತಮ್, ಸುನಂದಾ ಜಗದೀಶ್, ವಿಜಯ ರಾಯ್ಕರ್, ಪೂರ್ಣಿಮಾ ನರೇಂದ್ರ ಮತ್ತಿತರರು ಉಪಸ್ಥಿತರಿದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ