ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಕ್ಕಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, 1350 ಮಕ್ಕಳಲ್ಲಿ ಸೋಂಕು ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಶ್ರೀನಿವಾಸ್ ಆತಂಕಕಾರಿ ಮಾಹಿತಿ ಬಿಚ್ಚಿಟ್ಟಿದ್ದಾರೆ.
ಜಿಲ್ಲೆಯಲ್ಲಿ 250 ಮಕ್ಕಳಲ್ಲಿ ಸೋಂಕು ಸಕ್ರಿಯವಾಗಿದ್ದು, ಚಿಕಿತ್ಸೆಗಾಗಿ ಜಿಲ್ಲಾಡಳಿತದಿಂದ ಕ್ರಮ ಕೈಗೊಳ್ಳಲಾಗಿದೆ. ಕೋವಿಡ್ ಮೂರನೇ ಅಲೆಯಲ್ಲಿ ಮಕ್ಕಳಿಗೆ ಅಪಾಯ ಎಂಬ ಎಚ್ಚರಿಕೆ ಹಿನ್ನೆಲೆಯಲ್ಲಿ ಸೋಂಕಿತ ಮಕ್ಕಳ ಚಿಕಿತ್ಸೆಗಾಗಿ ವಿಶೇಷವಾಗಿ ಸಿದ್ಧತೆ ನಡೆಸಲಾಗಿದೆ ಎಂದರು.
4 ತಾಲೂಕು ಕೇಂದ್ರಗಳಲ್ಲಿ ಮಕ್ಕಳಿಗಾಗಿ ಕೋವಿಡ್ ಕೇರ್ ಸೆಂಟರ್ ತೆರೆಯಲಾಗುತ್ತಿದ್ದು, ನೆಲಮಂಗಲ, ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆಗಳಲ್ಲಿ ಮಕ್ಕಳಿಗಾಗಿ ಕೇರ್ ಸೆಂಟರ್ ತೆರೆಯಲಾಗುತ್ತಿದೆ. ಆಕಾಶ್ ಆಸ್ಪತ್ರೆಯಲ್ಲಿ ಮಕ್ಕಳಿಗಾಗಿ 25 ಬೆಡ್ ಮೀಸಲಿಡಲಾಗಿದೆ ಎಂದು ತಿಳಿಸಿದರು.

ವರದಿ ಮಹೇಶ್ ಗೌಡ ಬೆಂಗಳೂರು…