ಚಿತ್ರಮಂದಿರಗಳ ಪ್ರವೇಶಕ್ಕೆ ಕನಿಷ್ಠ 1 ಡೋಸ್ ಲಸಿಕೆ ಹಾಕಿಸಿಕೊಂಡವರಿಗೆ ಮಾತ್ರ ಪ್ರವೇಶ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಗರ್ಭಿಣಿ ಮಹಿಳೆಯರು ಮತ್ತು ಮಕ್ಕಳಿಗೆ ಅವಕಾಶ ನೀಡದಿರಲು ತೀರ್ಮಾನಿಸಲಾಗಿದೆ. ಅಕ್ಟೋಬರ್ 1 ರಿಂದ ಕೊವಿಡ್ ಪಾಸಿಟಿವಿಟಿ ದರ ಶೇ 1 ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಶೇ 100 ರಷ್ಟು ಸೀಟುಗಳ ಭರ್ತಿಗೆ ಅವಕಾಶ ನೀಡಲಾಗುವುದು.
ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ