ಶಿವಮೊಗ್ಗದಲ್ಲಿ ಬೆಳ್ಳಂಬೆಳ್ಳಗೆ ಕನ್ನಡ ಪರ ಸಂಘಟನೆಗಳು ಹಾಗೂ ರೈತ ಸಂಘದ ವತಿಯಿಂದ ಕಿಸಾನ್ ಮಂಚ್ ಕರೆದಿರುವ ಭಾರತ್ ಬಂದ್ ಗೆ ಬೆಂಬಲ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಲಾಯಿತು. ರೈತ ಸಂಘದ ಅಧ್ಯಕ್ಷ ಗಂಗಾಧರ್ ಅವರು ಮಾತನಾಡಿ ಈ ಅವೈಜ್ಞಾನಿಕ ಕಾಯಿದೆಗಳಿಂದ ಮುಂದಿನ ದಿನಗಳಲ್ಲಿ ಬಡವರಿಗೆ ಅನಾನುಕೂಲವಾಗಲಿದೆ ಎಂದರು. ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಕಾಂತ್ ರವರು ಮಾತನಾಡಿ ರೈತರು ಬೀದಿಗಿಳಿದು ಹೋರಾಟ ಮಾಡಬೇಕಾದ ಪರಿಸ್ಥಿತಿ ನಿರ್ಮಾಣ ಮಾಡಿದೆ ಸರ್ಕಾರ. ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂದರು.
ಕಾರ್ಮಿಕ ಕನ್ನಡಿಗರ ಕಾರ್ಮಿಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ರಾದ ವಾಟಾಳ್ ಮಂಜುನಾಥ್ ರವರು ರಸ್ತೆಯಲ್ಲಿ ಉರುಳು ಸೇವೆ ಮಾಡಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ಜಿಲ್ಲಾಧ್ಯಕ್ಷ ರಾದ ಕಿರಣ್ ರವರು ಮಾತನಾಡಿ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿದರು . ಕದಂಬ ಕನ್ನಡ ವೇದಿಕೆ ರಾಜ್ಯಾಧ್ಯಕ್ಷರಾದ ವಿಶ್ವನಾಥ ಗೌಡ ಮಾತನಾಡಿ ಇದು ರೈತ ವಿರೋಧಿ ಸರ್ಕಾರ ಎಂದು ಟೀಕಿಸಿದರು. ರೈತ ಸಂಘಟನೆ ಹಾಗೂ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ