ಶಿಕಾರಿಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಬಿಜೆಪಿ ಪಕ್ಷದ ಗ್ರಾಮ ಪಂಚಾಯತ ಚುನಾಯಿತ ಪ್ರತಿನಿಧಿಗಳಸಮಾವೇಶವನ್ನು ನಿಕಟಪೂರ್ವ ಮುಖ್ಯಮಂತ್ರಿಗಳು ಹಾಗೂ ಶಿಕಾರಿಪುರ ಶಾಸಕರಾದ ಬಿ. ಎಸ್. ಯಡಿಯೂರಪ್ಪನವರು ಇಂದು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಸಂಸದರಾದ ಬಿ. ವೈ. ರಾಘವೇಂದ್ರ ಅವರು ಮುಂಬರುವ ಚುನಾವಣೆಯ ಬಗ್ಗೆ ಮತ್ತು ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನೆಡೆಸಿದರು.

ಶಿವಮೊಗ್ಗ ಮಲೆನಾಡು ಪ್ರಾಧಿಕಾರದ ಅಧ್ಯಕ್ಷರಾದ ಗುರುಮೂರ್ತಿ, ಶಿಕಾರಿಪುರ ರೈತ ಮೋರ್ಚಾ ಅಧ್ಯಕ್ಷ ಪ್ರೇಮ ಕುಮಾರ್ ಗೌಡ, ತಾಲೂಕು ಬಿಜೆಪಿ ಅಧ್ಯಕ್ಷ ವೀರೇಂದ್ರ ಪಾಟೀಲ್. ತಾಲೂಕು ಪ್ರಧಾನ ಕಾರ್ಯದರ್ಶಿ ಸಿದ್ದಲಿಂಗಪ್ಪ ನಿಂಬೆಗುದ್ದಿ ಹಾಗೂ ಪಕ್ಷದ ಸ್ಥಳೀಯ ಮುಖಂಡರು, ಕ್ಷೇತ್ರದ ಗ್ರಾ.ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ