ಸ್ವಾತಂತ್ರ ದಿನದ 75ನೇ ವರ್ಷದ ಅಮೃತ ಮಹೋತ್ಸವ ಸಂದರ್ಭದಲ್ಲಿ ದೇಶದ ಪ್ರತಿಯೊಬ್ಬರು ಸ್ವಾತಂತ್ರ ಮಹತ್ವ ಅರಿತುಕೊಳ್ಳಬೇಕು ಎಂದು ಸ್ಮಾರ್ಟ್ ಸಿಟಿ ಮುಖ್ಯ ಇಂಜಿನಿಯರ್ ರಂಗನಾಥ್ ನಾಯಕ್ ಹೇಳಿದರು.
ಭಾರತ ದೇಶದ ಸ್ವಾತಂತ್ರ್ಯ ದಿನದ 75ನೇ ವರ್ಷದ ಅಮೃತ ಮಹೋತ್ಸವ ಪ್ರಯುಕ್ತ ಶಿವಮೊಗ್ಗ ಸ್ಮಾರ್ಟ್ ಸಿಟಿ, ಶಿವಮೊಗ್ಗ ಸೈಕಲ್ ಕ್ಲಬ್ ಸಹಯೋಗದಲ್ಲಿ ಆಯೋಜಿಸಿದ್ದ ಫ್ರೀಡಂ ಸೈಕ್ಲೋಥಾನ್, ವಾಕಾಥಾನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ದೇಶದ ಜನರು ಸ್ವಾತಂತ್ರ್ಯ ಮಹತ್ವ ಅರಿತುಕೊಂಡು ರಾಷ್ಟçದ ಪ್ರಗತಿಯಲ್ಲಿ ಕೈಜೋಡಿಸಬೇಕು. ಎಲ್ಲರೂ ಒಟ್ಟಾಗಿ ಸದೃಢ ರಾಷ್ಟç ನಿರ್ಮಾಣ ಮಾಡುವ ಕಾರ್ಯದಲ್ಲಿ ಭಾಗಿಯಾಗಬೇಕು. ಇದೇ ಸಂದರ್ಭದಲ್ಲಿ ನಗರದ ಸ್ವಚ್ಚತೆಯ ಬಗ್ಗೆ ವಿಶೇಷ ಜಾಗೃತಿ ಮೂಡಿಸಲಾಗುತ್ತಿದೆ. ಶಿವಮೊಗ್ಗ ನಗರದ ಜನತೆ ಸ್ವಚ್ಛತೆ ಬಗ್ಗೆ ವಿಶೇಷ ಗಮನ ವಹಿಸಬೇಕು ಎಂದು ತಿಳಿಸಿದರು.
ಸೈಕಲ್ ತುಳಿಯುವುದರಿಂದ ದೇಹ ಮತ್ತು ಮನಸ್ಸು ಸದೃಢವಾಗಿಟ್ಟುಕೊಳ್ಳಬಹುದು. ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ದಿನನಿತ್ಯ ಸೈಕಲ್ ಬಳಕೆ ಮಾಡಬೇಕು. ಎಲ್ಲರೂ ದಿನನಿತ್ಯ ಸ್ವಲ್ಪ ಸಮಯವಾದರೂ ಸೈಕಲ್ ಬಳಕೆ ಮಾಡಬೇಕು ಎಂದು ಸಲಹೆ ನೀಡಿದರು.
ನೆಹರು ರಸ್ತೆಯ ಸ್ಮಾರ್ಟ್ ಸಿಟಿ ಕಚೇರಿಯಿಂದ ನಗರದ ವಿವಿಧ ಪ್ರಮುಖ ರಸ್ತೆಗಳಲ್ಲಿ ಸೈಕಲ್ ಜಾಥಾ ನಡೆಸಿ ನಗರದ ಫ್ರೀಡಂ ಪಾರ್ಕ್ ಉದ್ಯಾನವನದವರೆಗೆ ತಲುಪಲಾಯಿತು. 200ಕ್ಕೂ ಹೆಚ್ಚು ಸದಸ್ಯರು ಸೈಕಲ್ ಜಾಥಾದಲ್ಲಿ ಭಾಗವಹಿಸಿದ್ದರು. ವಾಕಾಥಾನ್‌ನಲ್ಲಿ 150ಕ್ಕೂ ಹೆಚ್ಚು ಜನರು ಪಾಲ್ಗೊಂಡರು.
ಸ್ಮಾರ್ಟ್ ಸಿಟಿಯ ಶ್ರೀನಿವಾಸ್, ಮೋಹನ್‌ರಾವ್, ಶಿವಮೊಗ್ಗ ಸೈಕಲ್ ಕ್ಲಬ್ ಅಧ್ಯಕ್ಷ ಶ್ರೀಕಾಂತ್, ಕಾರ್ಯದರ್ಶಿ ಗಿರೀಶ್ ಕಾಮತ್, ನರಸಿಂಹಮೂರ್ತಿ, ಜಿ.ವಿಜಯ್‌ಕುಮಾರ್, ಗುರು, ರಫಿ, ಹರಿಶ್ ಪಾಟೀಲ್, ಸುರೇಶ್ ಕುಮಾರ್ ಹಾಗೂ ಸೈಕಲ್ ಕ್ಲಬ್ ಸದಸ್ಯರು ಹಾಜರಿದ್ದರು.
ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ