ಅಕ್ಟೋಬರ್ 02 ರಂದು ಗಾಂಧಿ ಜಯಂತಿ ಪ್ರಯುಕ್ತ ಸರ್ಕಾರದ ಸುತ್ತೋಲೆಯನ್ವಯ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟ ಉದ್ದಿಮೆದಾರರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಬೇಕು. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರಾದ ಚಿದಾನಂದ ತಿಳಿಸಿದ್ದಾರೆ.
ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ