ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರದಿಂದ ರೈತರ ಹತ್ಯೆಯನ್ನು ಹಾಗೂ ಹತ್ಯೆಗೊಳಗಾದ ರೈತ ಕುಟುಂಬವನ್ನು ಭೇಟಿಯಾಗಲು ಹೋದಂತಹ ಅಖಿಲ ಭಾರತ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಪ್ರಿಯಾಂಕ ಗಾಂಧಿ ರವರನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಶಿವಪ್ಪ ನಾಯಕ ವೃತ್ತದಲ್ಲಿ ರೈತ ವಿರೋಧಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಭಾವಚಿತ್ರಕ್ಕೆ ಮಸಿ ಬಳಿಯುವ ಮೂಲಕ ರೈತ ವಿರೋಧಿ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು
ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರ ರೈತ ವಿರೋಧಿ ಕಾಯ್ದೆಗಳನ್ನು ಜಾರಿ ಮಾಡುತ್ತಾ ರೈತರನ್ನು ದಮನ ಮಾಡಲು ಹೊರಟ್ಟಿದ್ದು ಇದನ್ನ ಯುವ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ
ಹಾಗೆಯೇ ಸುಮಾರು 10 ತಿಂಗಳಿಂದ ರೈತರು ದೆಹಲಿಯ ಗಡಿಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದರು ಕುರುಡುತನವನ್ನು ತೋರಿಸುವ ಸರ್ಕಾರ ಈಗಾಗಲೇ ಹಲವು ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ಇರುವ ಕಡೆ ರೈತರು ಪ್ರತಿಭಟನೆ ಮಾಡಿದರೆ ಹೋರಾಟವನ್ನು ಹತ್ತಿಕ್ಕಲು ರೈತರು ಮತ್ತೆ ಹೋರಾಟಗಾರರ ಮೇಲೆ ಕೇಸುಗಳನ್ನು ದಾಖಲಿಸುವುದು ಅಲ್ಲದೆ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ರೈತರನ್ನು ಹತ್ಯೆ ಮಾಡಿದ್ದು ಕೂಡಲೇ ಈ ರೈತ ವಿರೋಧಿ ಭ್ರಷ್ಟ ಬಿಜೆಪಿ ಸರ್ಕಾರವನ್ನ ಕೇಂದ್ರದ ಮತ್ತು ಹಲವು ರಾಜ್ಯಗಳಲ್ಲಿ ಬಿಜೆಪಿ ನಡೆಸುತ್ತಿರುವ ಸರ್ಕಾರವನ್ನು ವಜಾ ಮಾಡಬೇಕು ಎಂದು ರಾಷ್ಟ್ರಪತಿ ಗಳಲ್ಲಿ ಯುವ ಕಾಂಗ್ರೆಸ್ ಆಗ್ರಹಿಸುತ್ತದೆ
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ರಂಗನಾಥ್ , ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್ , ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್, ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ಲೋಕೇಶ್ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಎಸ್ ಕುಮರೇಶ್, ಹೊಳೆಹೊನ್ನೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಇಟಿ ನಿತಿನ್, ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಶಶಿ ಕುಮಾರ್ ಸಿರಿಗೆರೆ , ಯುವ ಕಾಂಗ್ರೆಸ್ ಮುಖಂಡ ಆರ್ ಕಿರಣ್ ಪದಾಧಿಕಾರಿಗಳಾದ ಪುಷ್ಪಕ್ ಕುಮಾರ್, ವೆಂಕಟೇಶ್ ಕಲ್ಲೂರ್ , ಪಿ ಅರ್ಜುನ್ , ನಿಹಲ್ ಸಿಂಗ್, ವಿಶಾಲ್ ಗುಜಾರ್ , ಶ್ರೀನಿವಾಸ್, ರಾಹುಲ್ ಮಲ್ಲಿ ಜಟ್ ಪಟ್ ನಗರ, ರಾಹುಲ್ ಜೈನ್ , ಚಿನ್ಮಯ್, ಹಾಗೂ ಯುವ ಕಾಂಗ್ರೆಸ್ ನ ಕಾರ್ಯಕರ್ತರು ಇದ್ದರು
ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ