ಗುಣಮಟ್ಟದ ಶಿಕ್ಷಣದ ಜತೆಯಲ್ಲಿ ದೇಶವನ್ನು ಅಭಿವೃದ್ಧಿ ಪಥದಲ್ಲಿ ಸಾಗಿಸಲು ಸಾಧ್ಯವಾಗುವ ಹೊಸ ರಾಷ್ಟಿçÃಯ ಶಿಕ್ಷಣ ನೀತಿಯನ್ನು ಪ್ರೋತ್ಸಾಹಿಸಬೇಕಿದೆ ಎಂದು ಕುವೆಂಪು ವಿವಿ ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ ಹೇಳಿದರು.
ಶಿವಮೊಗ್ಗ ನಗರದ ಫ್ರೆಂಡ್ಸ್ ಸೆಂಟರ್‌ನ ೫೫ನೇ ವಾರ್ಷಿಕೋತ್ಸವ ಪ್ರಯುಕ್ತ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.
ಸರ್ಕಾರಗಳು ಎಲ್ಲ ವರ್ಗದ ಜನರಿಗೂ ಶಿಕ್ಷಣ ಸೌಲಭ್ಯ ಕಲ್ಪಿಸುವಲ್ಲಿ ಶ್ರಮಿಸುತ್ತಿದೆ. ರಾಷ್ಟಿçÃಯ ಶಿಕ್ಷಣ ನೀತಿಯಿಂದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಧನಾತ್ಮಕ ಬದಲಾವಣೆಗಳನ್ನು ಕಾಣಬಹುದಾಗಿದೆ. ಹೊಸ ಶಿಕ್ಷಣ ನೀತಿಯ ಮಹತ್ವವನ್ನು ಎಲ್ಲರಿಗೂ ತಲುಪಿಸುವಲ್ಲಿ ಸಂಘ ಸಂಸ್ಥೆಗಳು ಮಹತ್ತರ ಪಾತ್ರ ವಹಿಸಬೇಕು ಎಂದು ತಿಳಿಸಿದರು.
ಹೊಸ ರಾಷ್ಟಿçÃಯ ಶಿಕ್ಷಣ ನೀತಿಯನ್ನು ಶಿಕ್ಷಣ ವ್ಯವಸ್ಥೆಯಲ್ಲಿ ಅಳವಡಿಸುವುದಕ್ಕೆ ಎಲ್ಲರೂ ಒಟ್ಟಾಗಿ ಶ್ರಮಿಸಬೇಕು. ಕೌಶಲ್ಯ ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ಸಿಗಲಿದೆ. ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿಯೂ ಶಿಕ್ಷಣ ವ್ಯವಸ್ಥೆಗೆ ಶಕ್ತಿ ತುಂಬುವ ಜತೆಯಲ್ಲಿ ಉನ್ನತ ಶಿಕ್ಷಣ ಎಲ್ಲರಿಗೂ ತಲುಪುವ ಆಶಯ ಹೊಂದಲಾಗಿದೆ ಎಂದರು.
ಫ್ರೆAಡ್ಸ್ ಸೆಂಟರ್ ಅಧ್ಯಕ್ಷ ವಿ.ನಾಗರಾಜ್ ಮಾತನಾಡಿ, ಸಂಘ ಸಂಸ್ಥೆ ಉತ್ತಮ ಕೆಲಸ ಮಾಡಬೇಕಾದರೆ ಸಾಮೂಹಿಕ ಪ್ರಯತ್ನ ಅಗತ್ಯವಿದೆ. ಸಂಘದಲ್ಲಿ ನೂತನ ಜವಾಬ್ದಾರಿ ವಹಿಸಿಕೊಂಡ ಎಲ್ಲರೂ ಒಟ್ಟಾಗಿ ಕೆಲಸ ಮಾಡುವ ಮೂಲಕ ಸಮಾಜಮುಖಿಯಾಗಬೇಕಿದೆ. ಅರ್ಹರಿಗೆ ನೆರವು ಒದಗಿಸುವ ಕಾರ್ಯದಲ್ಲಿ ಭಾಗಿಯಾಗಬೇಕು ಎಂದು ಹೇಳಿದರು.
ಫ್ರೆಂಡ್ಸ್ ಸೆಂಟರ್ ಕಾರ್ಯದರ್ಶಿ ಆರ್.ಎಸ್.ಗೋಪಾಲಕೃಷ್ಣರಾವ್ ಮಾತನಾಡಿ, ಕರೊನಾ ಅವಧಿಯಲ್ಲಿ ಫ್ರೆಂಡ್ಸ್ ಸೆಂಟರ್ ನಿರ್ವಹಿಸಿದ ಸೇವಾ ಕಾರ್ಯಗಳ ಬಗ್ಗೆ ವಿವರಿಸಿದರು. ಮಹಿಳಾ ವಿಭಾಗದ ಅಧ್ಯಕ್ಷೆ ಲತಾ ರಮೇಶ್ ಮಾತನಾಡಿದರು.
ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ಸಂಸ್ಥೆ ಉಪಾಧ್ಯಕ್ಷ ಎಸ್.ದತ್ತಾತ್ರಿ, ಜಿ.ವಿಜಯ್‌ಕುಮಾರ್, ಟಿ.ಆರ್.ವೆಂಕಟೇಶಮೂರ್ತಿ, ಸುಕೃತಾ ಭಟ್, ಎನ್.ಎಸ್.ಶ್ರೀಧರ್, ಮಹಿಳಾ ವಿಭಾಗದ ಕಾರ್ಯದರ್ಶಿ ಉಮಾ ವೆಂಕಟೇಶ್, ಮಾಜಿ ಅಧ್ಯಕ್ಷೆ ಸುಪ್ರಿಯಾ ಜಗನ್ನಾಥ್ ಮತ್ತಿತರರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ