ರಾಜ್ಯ ನಾಗರಿಕ ರಕ್ಷಣಾ ಸಮಿತಿ ವತಿಯಿಂದ ಶಿವಮೊಗ್ಗ ನಗರದಲ್ಲಿ ಉನ್ನತ ಶಿಕ್ಷಣ ಸಚಿವರಾದ ಡಾ ಅಶ್ವತ್ಥನಾರಾಯಣ ರವರಿಗೆ ಉನ್ನತ ಶಿಕ್ಷಣದಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಕಾರ್ಯವಾಗಬೇಕು ಎಂದು ಮನವಿ ಮಾಡಲಾಯಿತು.
ಉನ್ನತ ಶಿಕ್ಷಣವು ವಿದ್ಯಾರ್ಥಿಗಳ ಜೀವನದಲ್ಲಿ ಪ್ರಮುಖ ಘಟ್ಟವಾಗಿದ್ದು ಅಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮಾದಕ ವ್ಯಸನಗಳಿಗೆ ಬಲಿಯಾಗುತಿರುವ ಪ್ರಕರಣಗಳು ರಾಜ್ಯದಲ್ಲಿ ದಿನೇ ದಿನೆ ಹೆಚ್ಚಾಗುತಿದೆ ಹಾಗೂ ಮಾದಕ ವ್ಯಸನಗಳ ಅಭ್ಯಾಸದಿಂದ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಇದರಿಂದ ಉನ್ನತ ಶಿಕ್ಷಣವನ್ನು ಮುಗಿಸಿ ಸಮಾಜವನ್ನು ಕಟ್ಟುವ ಮಾನವ ಸಂಪನ್ಮೂಲವು ಕಡಿತವಾದಂತೆ ಕಾಣುತ್ತಿದೆ ಹಾಗಾಗಿ ಉನ್ನತ ಶಿಕ್ಷಣದಲ್ಲಿ ಮಾದಕ ವ್ಯಸನಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಹಾಗೂ ಕಾನೂನಿನ ಕ್ರಮಗಳ ಕುರಿತು ಅರಿವು ಮೂಡಿಸುವ ಕಾರ್ಯವಾದಲ್ಲಿ ವಿದ್ಯಾರ್ಥಿಗಳು ಮಾದಕ ವ್ಯಸನಗಳಿಂದ ದೂರ ಉಳಿಯುವುದರ ಜೊತೆಗೆ ಉತ್ತಮ ಪ್ರಜೆಗಳಾಗುತ್ತಾರೆ ಎಂದು ಸಚಿವರಲ್ಲಿ ಮನವಿ ಮಾಡಲಾಯಿತು
ಈ ಸಂದರ್ಭದಲ್ಲಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಆರ್ ರಾಘವೇಂದ್ರ ಖಜಾಂಚಿ ಶಿವಮೊಗ್ಗ ವಿನೋದ್ ನಗರ ಘಟಕದ ಉಪಾಧ್ಯಕ್ಷ ಶ್ರೇಯಸ್ ಉಪಸ್ಥಿತರಿದ್ದರು

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ