ಯಾವುದೇ ಚರ್ಚೆಯಿಲ್ಲದೇ ಏಕಾಏಕಿ ಜಾರಿಗೆ ತಂದಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಗೊಳಿಸುವಂತೆ ಜಿಲ್ಲಾ ಎನ್.ಎಸ್.ಯು.ಐ. ಆಗ್ರಹಿಸುತ್ತದೆ.
ನೂತನ ರಾಷ್ಟೀಯ ಶಿಕ್ಷಣ ನೀತಿಯನ್ನು ಜಾರಿಗೆ ತರುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನುಸರಿಸಿವ ಮಾರ್ಗಗಳು  ಸರಿಯಲ್ಲ. ದೇಶದ ಭವಿಷ್ಯವನ್ನೇ ರೂಪಿಸಬೇಕಾದ ಶಿಕ್ಷಣ ನೀತಿಯನ್ನು ಜಾರಿಗೆ ತರುವಾಗ ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಯಾವುದೇ ಚರ್ಚೆ ನಡೆಸಿಲ್ಲ. ಕೋವಿಡ್‍ನಂತಹ ರಾಷ್ಟ್ರೀಯ ವಿಪತ್ತು ಇರುವ ಸಂದರ್ಭದಲ್ಲಿ ಏಕಾಏಕಿ ಜಾರಿಗೊಳಿಸಲಾಗಿದೆ. ಶಿಕ್ಷಕರು, ವಿದ್ಯಾರ್ಥಿಗಳ ನಡುವೆ ಚರ್ಚೆ ನಡೆಸಲಿಲ್ಲ. ಇಂತಹ ಶಿಕ್ಷಣನೀತಿ ಎಷ್ಟು ಸಮರ್ಪಕವಾಗಿರಲಿದೆ ಎಂಬ ಅನುಮಾನಗಳು ಮೂಡಿವೆ.
ಇನ್ನು ಈ ಶಿಕ್ಷಣ ನೀತಿಯಲ್ಲಿ ಕಡ್ಡಾಯ ಮತ್ತು ಸಮಾನ ಶಿಕ್ಷಣದ ಬಗ್ಗೆ ಯಾವುದೇ ರೀತಿಯಲ್ಲಿ ಹೇಳಲಾಗಿಲ್ಲ. ಈ ಶಿಕ್ಷಣ ನೀತಿ ಜಾರಿಗೊಳಿಸಿರುವುದರಿಂದ ಶಿಕ್ಷಣ ತೊರೆಯುವವರ ಸಂಖ್ಯೆ ಹೆಚ್ಚಾಗುತ್ತದೆ. ಶಿಕ್ಷಣ ವ್ಯಾಪಾರೀಕರಣ, ಖಾಸಗೀಕರಣಕ್ಕೆ ಹೆಚ್ಚು ಆದ್ಯತೆ ನೀಡಲಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ಮೇಲೆ ಪ್ರಯೋಗ ನಡೆಸಿ ಅವರ ಭವಿಷ್ಯವನ್ನು ಹಾಳು ಮಾಡುವ ಹುನ್ನಾರ ಅಡಗಿದೆ. ವಿದ್ಯಾರ್ಥಿಗಳಿಗೆ ಮೂರು ಭಾಷೆಗಳನ್ನು ಕಲಿಯಲು ಅನಗತ್ಯ ಒತ್ತಡ ಈ ನೀತಿಯಲ್ಲಿದೆ. ಹಾಗೆಯೇ ಈ ನೀತಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಗಳ ಬಗ್ಗೆ ಸರಿಯಾದ ಮಾಹಿತಿ ಇಲ್ಲ.


ಮುಖ್ಯವಾಗಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಯಾವುದೇ ಪೂರ್ವ ಸಿದ್ಧತೆ ಇಲ್ಲದೇ ಏಕಾಏಕಿ ಜಾರಿಗೊಳಿಸಿರುವುದು ಹಲವು ಆತಂಕಗಳಿಗೆ ಕಾರಣವಾಗಿದೆ. ಕಾಲೇಜುಗಳಲ್ಲಿ ಪ್ರವೇಶಾತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಿಗಧಿಗೊಳಿಸುತ್ತಿರುವುದು ಖಾಸಗಿ ಶಿಕ್ಷಣ ಸಂಸ್ಥೆಗಳು ಡೊನೆಷನ್ ಹೆಸರಲ್ಲಿ ಪೋಷಕರನ್ನು ಸುಲಿಗೆ ಮಾಡಲು ಮುಕ್ತ ಅವಕಾಶ ಮಾಡಿಕೊಟ್ಟಂತಾಗಿದೆ. ಕಾಲೇಜುಗಳಲ್ಲೆ ಮೌಲ್ಯಮಾಪನ ಪದ್ಧತಿ, ವಿಶ್ವವಿದ್ಯಾಲಯಗಳ ಮಾರ್ಗಸೂಚಿಗಳಿಗೆ ಮಾನ್ಯತೆ ಇಲ್ಲದಿರುವುದು ಹಲವು ಅಕ್ರಮಗಳಿಗೆ ಕಾರಣವಾಗಲಿದೆ.
ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗಿರುವ, ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರೊಂದಿಗೆ ಯಾವುದೇ ಚರ್ಚೆ ನಡೆಸದೆ, ಸಂಸತ್ತಿನಲ್ಲಿಯೂ ಚರ್ಚೆ ನಡೆಸದೇ ಅಂಗೀಕರಿಸಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೂಡಲೇ ರದ್ದುಗೊಳಿಸಬೇಕು ಎಂದು ಗೌರವಾನ್ವಿತ ರಾಷ್ಟ್ರಪತಿಗಳನ್ನು ಒತ್ತಾಯಿಸುತ್ತಿದ್ದೇವೆ.

ಕೇಂದ್ರ ಸರ್ಕಾರ ಈ ನೀತಿಯನ್ನು ಕೂಡಲೇ ಕೈಬಿಡದಿದ್ದಲ್ಲಿ ಎನ್‍ಎಸ್‍ಯುಐ ವತಿಯಿಂದ ದೇಶಾದ್ಯಂತ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಈ ಮೂಲಕ ಎಚ್ಚರಿಸುತ್ತಿದ್ದೇವೆ.ಈ ಸಂದರ್ಭದಲ್ಲಿ NSUIನ ರಾಜ್ಯ ಕಾರ್ಯದರ್ಶಿ ಬಾಲಾಜಿ ನಗರ ಅಧ್ಯಕ್ಷ ವಿಜಯ್ ಜಿಲ್ಲಾ ಕಾರ್ಯಾಧ್ಯಕ್ಷ ರವಿ ,ಅಲ್ಪಸಂಖ್ಯಾತ ಕಾಂಗ್ರೆಸ್ ನ ನಗರ ಅಧ್ಯಕ್ಷರಾದ ಮಹಮ್ಮದ್ ನಿಹಾಲ್ ,ಯುವ ಕಾಂಗ್ರೆಸ್ ನ ರಾಜ್ಯ ಕಾರ್ಯದರ್ಶಿ ಚೇತನ್, ಯುವ ಕಾಂಗ್ರೆಸ್ ಮುಖಂಡ ಮಧುಸೂದನ್,ದಕ್ಷಿಣ ಬ್ಲಾಕ್ ಅಧ್ಯಕ್ಷ ವಿನಯ್ ,ಉತ್ತರ ಬ್ಲಾಕ್ ನ ಗಿರೀಶ್ ,ಭರತ್,ಸಂದೀಪ್,ಅಬ್ದುಲ್ಲ , ನಾಗೇಂದ್ರ NSUI ನ ರವಿ, ವೆಂಕಟೇಶ್,ಚಂದ್ರೋಜಿ ರಾವ್ ,ಅರ್ಜುನ್ ,ಚಂದನ್ ,ಅನಿಲ ಚಾರ್.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ